ಗುರುವಾರ , ಜನವರಿ 21, 2021
30 °C

'ಕಾರ್ಯಕರ್ತರು ಸ್ಪರ್ಧಿಸುವ ಚುನಾವಣೆಯಲ್ಲಿ ನಾಯಕರು ಕೆಲಸ ಮಾಡುತ್ತೇವೆ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಪಕ್ಷದ ಚಿಹ್ನೆ ಅಡಿ ಅಲ್ಲದಿದ್ದರೂ ಪಕ್ಷದ ಕಾರ್ಯಕರ್ತರು ಸ್ಪರ್ಧಿಸುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕೆಲಸ ಮಾಡುವ ಹೊಣೆ ನಾಯಕರ ಮೇಲಿದೆ ಎಂದು ಕಾರ್ಮಿಕ ಕಲ್ಯಾಣ, ಸಕ್ಕರೆ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ನಾವು ಚುನಾವಣೆಗೆ ನಿಂತಾಗ ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಈಗ ಅವರು ಚುನಾವಣೆಗೆ ಸ್ಪರ್ಧಿಸುವ ಸಮಯ ಬಂದಿದೆ. ಹೀಗಾಗಿ ಅವರನ್ನು ಗೆಲ್ಲಿಸಲು ಶ್ರಮಿಸುತ್ತೇವೆ' ಎಂದರು.

'ಬಿಜೆಪಿಯಲ್ಲಿ ಭಿನ್ನಮತ ಇದೆ ಎಂಬುದು ಮಾಧ್ಯಮಗಳ ಸೃಷ್ಟಿ. ನಮ್ಮದು ರಾಷ್ಟ್ರೀಯ ಪಕ್ಷ.   ಬಿಜೆಪಿ ಎಂಬುದೇ ನಮ್ಮ ಬಣ ಹೊರತು, ನಮ್ಮೊಳಗೆ ಪ್ರತ್ಯೇಕ ಬಣಗಳಿಲ್ಲ' ಎಂದರು.

'ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಅದೆಲ್ಲ ಕೇವಲ ಊಹಾಪೋಹ' ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು