ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಪೊಲೀಸ್ ವಸತಿ ಸಮುಚ್ಛಯ ಉದ್ಘಾಟನೆ

Last Updated 27 ಜುಲೈ 2020, 16:54 IST
ಅಕ್ಷರ ಗಾತ್ರ

ಕಾರವಾರ: ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ನಗರ ಠಾಣೆ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ನಿರ್ಮಿಸಲಾದ ವಸತಿ ಗೃಹಗಳ ಸಮುಚ್ಛಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಸೋಮವಾರ ಉದ್ಘಾಟಿಸಿದರು.

‘ಪೊಲೀಸ್ ಗೃಹ’ ಯೋಜನೆಯಡಿ ಸುಮಾರು ₹ 19 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ಕೈಗೊಳ್ಳಲಾಗಿದೆ. ಸಮುಚ್ಛಯದಲ್ಲಿ ಆರು ಅಧಿಕಾರಿಗಳಿಗೆ ಹಾಗೂ 120 ಸಿಬ್ಬಂದಿಗೆ ಮನೆಗಳನ್ನು ನಿರ್ಮಾಣ ಮಾಡಲಾಗಿದೆ.

ಸಮುಚ್ಛಯವನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಸಚಿವರು, ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ‍ಪೊಲೀಸರ ಸೇವೆಯನ್ನು ಸ್ಮರಿಸಿದರು.

ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ‘ಪೊಲೀಸರ ವಸತಿ ಸಮುಚ್ಛಯಕ್ಕೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ. ಶಾಸಕರ ಅನುದಾನದಲ್ಲಿ ₹ 10 ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗುವುದು’ ಎಂದು ತಿಳಿಸಿದರು.

‘ಈ ಹಿಂದೆ ಪೊಲೀಸ್ ವಸತಿ ಗೃಹಗಳಿಗೆ ಯಾವುದೇ ಸೌಲಭ್ಯಗಳು ಇರಲಿಲ್ಲ. ಪೊಲೀಸರು ಅವುಗಳಲ್ಲಿ ಕಷ್ಟದಿಂದಲೇ ವಾಸಿಸುತ್ತಿದ್ದರು. ಇದರಿಂದಾಗಿ ಪೊಲೀಸರು ನೆಮ್ಮದಿಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಇನ್ನಷ್ಟು ವಸತಿಗೃಹಗಳನ್ನು ನಿರ್ಮಿಸಿಕೊಡುವಂತೆ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ’ ಎಂದು ಭರವಸೆ ನೀಡಿದರು.

ಸಮಾರಂಭದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ, ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT