ಸಂಚಾರ ನಿಯಮ ಉಲ್ಲಂಘನೆ: ವಾಹನಗಳಿಗೆ ‘ವೀಲ್ ಲಾಕ್’

ಗುರುವಾರ , ಜೂನ್ 20, 2019
31 °C

ಸಂಚಾರ ನಿಯಮ ಉಲ್ಲಂಘನೆ: ವಾಹನಗಳಿಗೆ ‘ವೀಲ್ ಲಾಕ್’

Published:
Updated:
Prajavani

ಗೋಕರ್ಣ: ಇಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಗಮ ಸಂಚಾರಕ್ಕೆ ಪೊಲೀಸರು ಕ್ರಮ ಕೈಗೊಂಡರೂ ಚಾಲಕರಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ. ಹಾಗಾಗಿ ಎಲ್ಲೆಂದರಲ್ಲಿ ನಿಲುಗಡೆ ಮಾಡಲಾಗಿದ್ದ ವಾಹನಗಳಿಗೆ ಪೊಲೀಸರು ವೀಲ್ ಲಾಕ್ ಅಳವಡಿಸಿದರು. ಚಾಲಕರಿಗೆ ದಂಡ ವಿಧಿಸಿದರು.

ಪಿ.ಎಸ್.ಐ ಸಂತೋಷಕುಮಾರ್.ಎಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ನಿಲುಗಡೆ ನಿಷೇಧ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ವಾಹನಗಳ ಚಾಲಕರ ವಿರುದ್ಧ ಕ್ರಮ ಕೈಗೊಂಡರು. ರಥಬೀದಿ ಹಾಗೂ ಏಕಮುಖ ರಸ್ತೆಯಲ್ಲಿ ವಾಹನ ನಿಲ್ಲಿಸುವುದನ್ನು ಈಗಾಗಲೇ ನಿಷೇಧಿಸಲಾಗಿದೆ. ಕೆಲವು ಕಡೆ ಫಲಕಗಳನ್ನೂ ಅಳವಡಿಸಲಾಗಿದೆ.‌ ಈ ಬಗ್ಗೆ ಜನರಿಗೆ ಸಾಕಷ್ಟು ತಿಳಿವಳಿಕೆಯನ್ನೂ ನೀಡಲಾಗಿದೆ. ಆದರೂ ವಾಹನ ಸವಾರರು ನಿಯಮ ಮೀರುತ್ತಿರುವುದರಿಂದ ಹಲವು ಬಾರಿ ಸಮಸ್ಯೆಯಾಗಿತ್ತು. 

ಮುಂದಿನ ದಿನಗಳಲ್ಲಿ ಹಲವು ಕಡೆ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಸಂಚಾರ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು. ಮುಖ್ಯರಸ್ತೆ ಮತ್ತು ರಥಬೀದಿಯಲ್ಲಿ ಕೆಲವರು ಅತಿ ವೇಗದಿಂದ, ನಿಯಮ ಮೀರಿ ದ್ವಿಚಕ್ರ ವಾಹನಗಳು ಹಾಗೂ ಆಟೊ ರಿಕ್ಷಾಗಳನ್ನು ಚಲಾಯಿಸುತ್ತಿದ್ದಾರೆ. ಇದರಿಂದ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ದೂರುಗಳು ಬಂದಿದೆ. ಅಂಥವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಸಂತೋಷಕುಮಾರ್ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !