ಮಂಗಳವಾರ, ಜುಲೈ 27, 2021
21 °C

ರೈಲ್ವೆ ಖಾಸಗೀಕರಣಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಭಾರತೀಯ ರೈಲ್ವೆಯನ್ನು ವಿಭಜಿಸಿ ಖಾಸಗೀಕರಣ ಮಾಡುವ ಕೇಂದ್ರ ಸರ್ಕಾರದ ಚಿಂತನೆಯನ್ನು ಜಿಲ್ಲೆಯ ವಿವಿಧೆಡೆ ಶುಕ್ರವಾರ ಖಂಡಿಸಲಾಯಿತು. ರೈಲು ನಿಲ್ದಾಣಗಳ ಬಳಿ ಸೇರಿದ ಸಿ.ಐ.ಟಿ.ಯು ಕಾರ್ಯಕರ್ತರು ಈ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿದರು.

ದೇಶವು ಕೋವಿಡ್‌ನಿಂದಾಗಿ ಸಂದಿಗ್ಧ ಪರಿಸ್ಥಿತಿಯಲ್ಲಿದೆ. ಕೋಟ್ಯಂತರ ಭಾರತೀಯರು ಮನೆಯಿಂದ ಹೊರಬರದೇ ತಮ್ಮ ಜೀವಗಳ ರಕ್ಷಣೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ದೇಶದ ಸಾರ್ವಜನಿಕ ಸಂಪತ್ತುಗಳನ್ನು ಕಾರ್ಪೊರೇಟ್ ಕಂಪನಿಗಳಿಗೆ ಮಾರಾಟ ಮಾಡುವ ಕೆಲಸಕ್ಕೆ ಕೈಹಾಕಿದೆ. ಈಗಾಗಲೇ ನಮ್ಮ ದೇಶದ ಕಲ್ಲಿದ್ದಲು ಗಣಿಗಳನ್ನು, ರಕ್ಷಣಾ ವಲಯದ ಸಂಸ್ಥೆಗಳನ್ನು, ವಿದ್ಯುತ್‌ಚ್ಛಕ್ತಿ ನಿಗಮಗಳನ್ನು, ಎ.ಪಿ.ಎಂ.ಸಿ.ಗಳನ್ನು ಖಾಸಗೀಕರಣ ಮಾಡಿದೆ. ಇದೇ ಮಾದರಿಯಲ್ಲಿ ರೈಲ್ವೇಯನ್ನೂ ಖಾಸಗೀಕರಣ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದ 109 ರೈಲು ನಿಲ್ದಾಣಗಳನ್ನು ಖಾಸಗಿಯವರ ಸುಪರ್ದಿಗೆ ನೀಡಿ 151 ಖಾಸಗಿ ರೈಲುಗಳ ಸಂಚಾರಕ್ಕೆ ‌ತೀರ್ಮಾನಿಸಲಾಗದೆ. ಈ ರೀತಿ ಮಾಡುವುದು ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.