ಸೋಮವಾರ, ಸೆಪ್ಟೆಂಬರ್ 16, 2019
27 °C
ಡಿಕೆಶಿ ಬಂಧನದ ಹಿನ್ನೆಲೆ

ದಾಸನಕೊಪ್ಪದಲ್ಲಿ ರಸ್ತೆ ತಡೆದು ಪ್ರತಿಭಟನೆ

Published:
Updated:
Prajavani

ಶಿರಸಿ: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಬಂಧನ ಖಂಡಿಸಿ ಬನವಾಸಿ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ತಾಲ್ಲೂಕಿನ ದಾಸನಕೊಪ್ಪದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಪಕ್ಷದ ಮುಖಂಡ ಸಿ.ಎಫ್.ನಾಯ್ಕ ಮಾತನಾಡಿ, ‘ಕೇಂದ್ರ ಬಿಜೆಪಿ ಸರ್ಕಾರವು ಅಧಿಕಾರ ದುರುಪಯೋಗ ಮಾಡಿಕೊಂಡು ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುತ್ತಿದೆ’ ಎಂದು ಆರೋಪಿಸಿದರು. ಯುವ ಘಟಕದ ಅಧ್ಯಕ್ಷ ಸಂತೋಷ ಶೆಟ್ಟಿ ಮಾತನಾಡಿ, ‘ಬಿಜೆಪಿ ಸರ್ಕಾರವು ಐಡಿ, ಇಡಿ ದುರ್ಬಳಕೆ ಮಾಡಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ. ಅವರನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು’ ಎಂದರು. ಎಪಿಎಂಸಿ ಅಧ್ಯಕ್ಷ ಸುನೀಲ ನಾಯ್ಕ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಬಸವರಾಜ ನಂದಿಕೇಶ್ವರಮಠ ಮಾತನಾಡಿದರು. ನೂರಾರು ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Post Comments (+)