ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ: ವಾಹನ ಸಂಚಾರ ಅಸ್ತವ್ಯಸ್ತ

Last Updated 12 ಮಾರ್ಚ್ 2021, 6:45 IST
ಅಕ್ಷರ ಗಾತ್ರ

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 66ರ ಮಾದನಗೇರಿ ಬಳಲೆಯಲ್ಲಿ ಮೇಲ್ಸೇತುವೆಗೆ ಆಗ್ರಹಿಸಿ ಜಿಲ್ಲಾ ಗ್ರಾಮೀಣ ಯುವ ಹೋರಾಟ ಸಮಿತಿಯ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಹೆದ್ದಾರಿಯ ಎರಡೂ ಕಡೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ವಾಹನ ಸಂಚಾರ ತಡೆದು ಒಂದು ಗಂಟೆಯಾದರೂ ಅಧಿಕಾರಿಗಳು ಸ್ಥಳಕ್ಕೆ ಬರಲಿಲ್ಲ. ಕುಮಟಾ ಉಪವಿಭಾಗಾಧಿಕಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬರುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಮಧ್ಯೆ ಭೇಟಿ ನೀಡಿದ ತಹಶೀಲ್ದಾರ್ ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯ ಪ್ರದೀಪ್ ನಾಯಕ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಮಾನಂದ ನಾಯಕ, ಅಧಿಕಾರಿಗಳು ಸ್ಥಳಕ್ಕೆ ಬಂದು ಮೇಲ್ಸೇತುವೆಯ ಭರವಸೆ ನೀಡುವವರೆಗೂ ಅನಿರ್ದಿಷ್ಟಾವಧಿ ಬಂದ್ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬಾರದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT