ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ವಿರೋಧಿಸಿ ಬೃಹತ್ ಪ್ರತಿಭಟನೆ

ಶಾಂತಿಯುತವಾಗಿ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು
Last Updated 4 ಜನವರಿ 2020, 12:00 IST
ಅಕ್ಷರ ಗಾತ್ರ

ಶಿರಸಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಗರಿಕ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಶನಿವಾರ ಇಲ್ಲಿ ಕರೆದಿದ್ದ ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.

ಶಿವಾಜಿ ಚೌಕದಿಂದ ಹೊರಟ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಮಾಜಗುಡ್ಡದಲ್ಲಿ ಸಮಾಪ್ತಿಗೊಂಡಿತು. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯ ಘಟಕದ ಅಧ್ಯಕ್ಷ ಮುನೀರ್ ಕಾಟಿಪಳ್ಳ, ‘ಕಾಯ್ದೆ ತಿದ್ದುಪಡಿ ತರುವ ಮೂಲಕ ದೀನ ದಲಿತರು, ತಳ ಸಮುದಾಯದ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಿ, ಮತ್ತೆ ಅಧಿಕಾರಕ್ಕೆ ಬರುವುದು ಕೇಂದ್ರ ಸರ್ಕಾರದ ತಂತ್ರವಾಗಿದೆ. ಅಸ್ಸಾಂನಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದ ಎನ್‌ಆರ್‌ಸಿ ದೋಷಗಳಿಂದ ಕೂಡಿದ್ದು ಎಲ್ಲರಿಗೂ ತಿಳಿದಿದೆ. ಈ ನಡುವೆಯೇ ಇದನ್ನು ಇಡೀ ದೇಶಕ್ಕೆ ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ’ ಎಂದು ಆರೋಪಿಸಿದರು.

ದೇಶ ಕಟ್ಟಲು ಎಲ್ಲ ಸಮುದಾಯದವರ ಪಾತ್ರವಿದೆ. ಹೀಗಿರುವ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡಲು ಸರ್ಕಾರ ಎನ್‌ಆರ್‌ಸಿ, ಸಿಎಎ ಜಾರಿಗೊಳಿಸಲು ಹೊರಟಿರುವ ಕ್ರಮ ಸರಿಯಲ್ಲ. ಇದರ ವಿರುದ್ಧ ಜಾತಿ, ಧರ್ಮ ಮೀರಿದ ಹೋರಾಟ ನಡೆಯಬೇಕು. ಸಮಾಜದಲ್ಲಿನ ಶಾಂತಿ ಕದಡಲು ರಾಜಕೀಯದ ಬಳಕೆ ಆಗಬಾರದು ಎಂದು ಹೇಳಿದರು.

ಸಿಐಟಿಯು ಪ್ರಮುಖರಾದ ಸಿ.ಆರ್.ಶಾನಭಾಗ, ಯಮುನಾ ಗಾಂವಕರ, ನಾಗಪ್ಪ ನಾಯ್ಕ, ಸುಧಾಕರ ಜೋಗಳೇಕರ, ಮಹಮ್ಮದ್ ಇಕ್ಬಾಲ್ ಬಿಳಗಿ, ಆದಂ ಖಾನ್, ಅಬ್ದುಲ್ ಹಮೀದ್, ಮೆಹಬೂಬ್ ಇದ್ದರು. ಪೊಲೀಸರ ಬಿಗಿ ಬಂದೋಬಸ್ತ್‌ನಲ್ಲಿ ಪ್ರತಿಭಟನೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT