ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ: ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

Last Updated 18 ಜೂನ್ 2020, 4:12 IST
ಅಕ್ಷರ ಗಾತ್ರ

ಕಾರವಾರ: ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ಬರೆಯಲು ನಗರದ ಪರೀಕ್ಷಾ ಕೇಂದ್ರಗಳಿಗೆ ಗುರುವಾರ ಬಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ, ಮುಖಗವಸು ಧರಿಸಿದ್ದನ್ನು ಖಾತ್ರಿ ಪಡಿಸಿಕೊಳ್ಳಲಾಯಿತು.

ಪರೀಕ್ಷೆ ಬರೆಯುವ ಕೊಠಡಿಗಳಲ್ಲಿ ಡೆಸ್ಕ್ ಗಳ ನಡುವೆ ಕನಿಷ್ಠ ಒಂದು ಮೀಟರ್ ಅಂತರವನ್ನು ಕಾಯ್ದುಕೊಳ್ಳಲಾಗಿದೆ. ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನೂ ಸ್ಯಾನಿಟೈಸ್ ಮಾಡಿ ವಿದ್ಯಾರ್ಥಿಗಳಿಗೆ ನೀಡಲಾಯಿತು.

ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 30 ಪರೀಕ್ಷಾ ಕೇಂದ್ರಗಳಿವೆ. ಜಿಲ್ಲೆಯಲ್ಲಿ ಒಟ್ಟು 13,568 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಅವರ ಪೈಕಿ 577 ವಿದ್ಯಾರ್ಥಿಗಳು ಹೊರ ಜಿಲ್ಲೆಯವರು ಹಾಗೂ 17 ವಿದ್ಯಾರ್ಥಿಗಳು ಹೊರ ರಾಜ್ಯದವರಿದ್ದಾರೆ.

ಎಲ್ಲ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡುವ ಕಾರಣ ಪರೀಕ್ಷಾ ಕೇಂದ‌್ರಕ್ಕೆ ಸುಮಾರು ಒಂದು ಮುಕ್ಕಾಲು ಗಂಟೆ ಮುಂಚಿತವಾಗಿಯೇ ಬರಲು ಅಧಿಕಾರಿಗಳು ತಿಳಿಸಿದ್ದರು. ಜಿಲ್ಲೆಯಾದ್ಯಂತ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 105 ಬಸ್ ಗಳನ್ನು ಪಿ.ಯು ಶಿಕ್ಷಣ ಮಂಡಳಿ ವ್ಯವಸ್ಥೆ ಮಾಡಿದೆ. ಕೆಲವರು ತಮ್ಮ ಸ್ವಂತ ವಾಹನಗಳಲ್ಲಿ, ಪಾಲಕರ ಜೊತೆಗೆ ಪರೀಕ್ಷಾ ಕೇಂದ್ರಕ್ಕೆ ಬಂದರು.

ದ್ವಿತೀಯ ಪಿ.ಯು ಇಂಗ್ಲಿಷ್ ಪರೀಕ್ಷೆಯು ಮಾರ್ಚ್ 23ರಂದೇ ನಡೆಯಬೇಕಿತ್ತು. ಆದರೆ, ಕೇಂದ್ರ ಸರ್ಕಾರವು ಅಷ್ಟರಲ್ಲಿ ಲಾಕ್‌ಡೌನ್ ಘೋಷಿಸಿದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT