ಮಂಗಳವಾರ, ಏಪ್ರಿಲ್ 13, 2021
25 °C
20 ಗ್ರಾಮಗಳಲ್ಲಿ ಪರಿಶೀಲಿಸಿದ ತಾ.ಪಂ ಅಧ್ಯಕ್ಷೆ

ಅಂಕೋಲಾ: ತುಕ್ಕು ಹಿಡಿಯುತ್ತಿರುವ ಶುದ್ಧ ನೀರಿನ ಘಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಂಕೋಲಾ: ‘ಗ್ರಾಮೀಣ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯು ಈವರೆಗೆ ಗ್ರಾಮಸ್ಥರ ಬಾಯಾರಿಕೆ ನೀಗಿಸುತ್ತಿಲ್ಲ. ಇದು ಬೇಸರದ ಸಂಗತಿಯಾಗಿದೆ. ಜಿಲ್ಲಾಧಿಕಾರಿ ಈ ಬಗ್ಗೆ ಕೂಡಲೇ ಕ್ರಮವಹಿಸಿ ಯೋಜನೆಯ ಸದುಪಯೋಗ ಆಗುವಂತೆ ನೋಡಿಕೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸುಜಾತಾ ಗಾಂವಕರ ಹೇಳಿದರು.

ತಾಲ್ಲೂಕಿನ 20 ಗ್ರಾಮ ಪಂಚಾಯ್ತಿ ವ್ಯಾಪ್ತಿಗಳಲ್ಲಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶನಿವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ಎಲ್ಲೆಡೆ ಹನಿ ನೀರಿಗೆ ಹಾಹಾಕಾರ ಎದುರಾಗಿದೆ. ಶುದ್ದ ನೀರಿನ ಘಟಕಗಳು ಸುಸ್ತಿಗೆ ಬಂದರೆ ಸಮಸ್ಯೆಗೆ ಪರಿಹಾರ ಸಿಗಬಹುದು. ಕೂಡಲೇ ಜನರ ಬವಣೆಗೆ ಸ್ಪಂದಿಸುವ ಕಾರ್ಯ ಆಗಬೇಕಿದೆ. ಇದೆನ್ನೆಲ್ಲ ಕಂಡು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಕ್ರಮ ಕೈಗೊಳ್ಳದಿರುವುದು ಖಂಡನೀಯ’ ಎಂದರು.

ತಾಲ್ಲೂಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ನಾಯ್ಕ ಮಾತನಾಡಿ, ‘ಅನೇಕ ಗ್ರಾಮಗಳಲ್ಲಿ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಿ ಎರಡು ವರ್ಷ ಕಳೆಯುತ್ತ ಬಂದಿದೆ. ಪರಿಕರಗಳು ಮಳೆ, ಬಿಸಿಲಿಗೆ ತುಕ್ಕು ಹಿಡಿದಿವೆ. ಕರಾವಳಿ ಭಾಗದಲ್ಲಿ ಉಪ್ಪಿನ ತೇವಾಂಶ ಇರುವುದರಿಂದ ಬೇಗ ತುಕ್ಕು ಹಿಡಿಯುತ್ತವೆ. ಆದರೆ, ಗುತ್ತಿಗೆ ಪಡೆದ ಕಂಪೆನಿಗಳಿಗೆ ಇದ್ಯಾವುದರ ಚಿಂತೆಯೂ ಇಲ್ಲ. ಇಂತಹ ಬೇಜವಾಬ್ದಾರಿ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಉಷಾ ಉದಯ ನಾಯ್ಕ, ತಾಲ್ಲೂಕು ಪಂಚಾಯ್ತಿ ಸದಸ್ಯ ಸಂಜೀವ ಕುಚನಾಡ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು