ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಅಡ್ಡೆ ಮೇಲೆ ದಾಳಿ

Last Updated 19 ಸೆಪ್ಟೆಂಬರ್ 2020, 16:29 IST
ಅಕ್ಷರ ಗಾತ್ರ

ಜೊಯಿಡಾ: ತಾಲ್ಲೂಕಿನ ರಾಮನಗರ ಭಾಗದ ಅಕ್ರಮ ಮರಳು ಅಡ್ಡೆಗಳ ಮೇಲೆ ತಹಶೀಲ್ದಾರ್ ಸಂಜಯ ಕಾಂಬಳೆ ಶನಿವಾರ ದಾಳಿ ಮಾಡಿ, ಅಕ್ರಮವಾಗಿ ಸಂಗ್ರಹಿಸಿಟ್ಟ ಸುಮಾರು 42 ಬ್ರಾಸ್ ಮರಳನ್ನು ಜಪ್ತಿ ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದಾರೆ.

ತಾಲ್ಲೂಕಿನ ಶೀಂಗರಗಾವ, ಕೂಡಲಗಾವ, ಆಮಶೇತ ಗ್ರಾಮಗಳಲ್ಲಿ ಅರಣ್ಯ ಹಾಗೂ ಮಾಲ್ಕಿ ಜಮೀನಿನಲ್ಲಿ ಮರಳು ಸಂಗ್ರಹಿಸಲಾಗಿತ್ತು. ‘ತಾಲ್ಲೂಕಿನ ರಾಮನಗರ ಹಾಗೂ ಚಾಂದೇವಾಡಿ ಭಾಗಗಳಲ್ಲಿಅನಧಿಕೃತ ಮರಳುಗಾರಿಕೆಯಿಂದಾಗಿ ರೈತರಿಗೆ ಹಲವು ಸಮಸ್ಯೆಗಳು ಎದುರಾಗುತ್ತಿವೆ’ ಎಂದು ಹಲವು ದಿನಗಳಿಂದ ಸಾರ್ವಜನಿಕರು ಆರೋಪಿಸುತ್ತಿದ್ದರು.

‘ಅಕ್ರಮವಾಗಿ ಮರಳನ್ನು ಸಾಗಿಸುತ್ತಿದ್ದ ಟ್ರಾಕ್ಟರ್ ಒಂದನ್ನು ಶುಕ್ರವಾರ ಉಪ ವಿಭಾಗಾಧಿಕಾರಿ ಎಂ.ಪ್ರಿಯಾಂಗ ವಶಕ್ಕೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT