ಯಲ್ಲಾಪುರ: ತಾಲ್ಲೂಕಿನ ಕಳಚೆಯಲ್ಲಿ ಶುಕ್ರವಾರ ಮನೆ ಮೇಲೆ ಗುಡ್ಡ ಕುಸಿದು ದೇವಕಿ ನಾರಾಯಣ ಗಾಂವ್ಕರ (48) ಎಂಬುವವರು ಮೃತಪಟ್ಟಿದ್ದಾರೆ. ಮನೆಯಲ್ಲಿದ್ದ ಇಬ್ಬರು ಮಕ್ಕಳು ಮತ್ತು ಮೂವರು ದೊಡ್ಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೃತರ ದೇಹವನ್ನು ಶುಕ್ರವಾರ ಸಂಜೆ ಊರವರೆಲ್ಲ ಸೇರಿ ಹೊರತೆಗೆದಿದ್ದಾರೆ. ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಸ್ಥಳಕ್ಕೆ ಐದು ಕಿಲೋಮೀಟರ್ ನಡೆದುಕೊಂಡು ಹೋಗಿ ಪರಿಶೀಲನೆ ನಡೆಸಿ, ಕುಟುಂಬದವರಿಗೆ ಸಾಂತ್ವನ ಹೇಳಿದರು.

ವ್ಯಕ್ತಿ ಕಾಣೆ: ತಾಲ್ಲೂಕಿನ ಹಾಸಣಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಾಡದ ಕಬ್ಬಿನಗದ್ದೆ ಸೇತುವೆ ದಾಟುತ್ತಿದ್ದ ಆನಂದ ನಾಗಾ ಮೊಗೇರ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರಿಗೆ ಹುಡುಕಾಟ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.