ಸೋಮವಾರ, ಮೇ 23, 2022
28 °C

ಉತ್ತರ ಕನ್ನಡದ ವಿವಿಧೆಡೆ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳೆ–ಸಾಂದರ್ಭಿಕ ಚಿತ್ರ

ಕಾರವಾರ: ಉತ್ತರಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗುರುವಾರ ಬೆಳಗಿನ ಜಾವ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದೆ. ಅಕಾಲಿಕವಾಗಿ ಮಳೆಯಾಗುತ್ತಿರುವುದು ಕೃಷಿಕರು ಮತ್ತು ರೈತರ ಆತಂಕಕ್ಕೆ ಕಾರಣವಾಗಿದೆ.

ಕರಾವಳಿಯ ಹೊನ್ನಾವರ ಪಟ್ಟಣ ಹಾಗೂ ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಕೆಲವು ನಿಮಿಷಗಳ ಕಾಲ ಜೋರಾಗಿ ವರ್ಷಧಾರೆಯಾಯಿತು. ಅಂತೆಯೇ ಕುಮಟಾ ಮತ್ತು ಅಂಕೋಲಾದಲ್ಲಿ ರಾತ್ರಿ ಮೂರು ಗಂಟೆಗೆ ಸಾಧಾರಣ ಪ್ರಮಾಣದಲ್ಲಿ ಮಳೆ ಬಂತು. ಶಿರಸಿಯಲ್ಲೂ ತುಂತುರು ಹನಿ ಬಿದ್ದಿದೆ.‌ ಉಳಿದಂತೆ, ಜಿಲ್ಲೆಯ ವಿವಿಧೆಡೆ ಚದುರಿದಂತೆ ಮೋಡ ಕವಿದ ವಾತಾವರಣವಿದೆ.

ಅಕಾಲಿಕ ಮಳೆಯಿಂದ ಅಡಿಕೆ ಬೆಳೆಗಾರರು, ಮೆಕ್ಕೆಜೋಳ, ಭತ್ತ ಕೃಷಿಕರು ಚಿಂತಿತರಾಗಿದ್ದಾರೆ. ಫಸಲು ಮನೆಯಂಗಳದಲ್ಲಿ, ಜಮೀನಿನಲ್ಲಿ ಒಣಗುತ್ತಿದ್ದು, ಮಳೆ ನೀರಿನಲ್ಲಿ ತೋಯ್ದರೆ ಸಂಪೂರ್ಣ ಹಾಳಾಗುವ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಮತ್ತಷ್ಟು ಮಳೆಯ ಸಾಧ್ಯತೆ ಕಡಿಮೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು