ಸೋಮವಾರ, ಜುಲೈ 26, 2021
25 °C

ಭಟ್ಕಳ: ಚೌಥನಿ ನದಿ ಭರ್ತಿ, ಗ್ರಾಮ ಜಲಾವೃತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೌಥನಿ ಗ್ರಾಮ ಸಂಪೂರ್ಣ ಜಲಾವೃತವಾಗಿರುವುದು

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಶನಿವಾರ ತಡರಾತ್ರಿಯಿಂದ ಜೋರು ಮಳೆ ಮುಂದುವರಿದಿದೆ. ಭಟ್ಕಳದ ಚೌಥನಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ವಿವಿಧ ರಸ್ತೆಗಳು, ಚೌಥನಿ ಗ್ರಾಮ ಸಂಪೂರ್ಣ ಜಲಾವೃತವಾಗಿವೆ.

ಪಟ್ಟಣದ ಶಂಸುದ್ದೀನ್ ವೃತ್ತದಲ್ಲಿ ನೀರು ಹರಿಯದೇ ಜಲಾವೃತಗೊಂಡಿದೆ. ಕೆಲವು ಮನೆಗಳಿಗೂ ನೀರು ನುಗ್ಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಚತುಷ್ಪಥ ಕಾಮಗಾರಿ ಅಸಮರ್ಪಕವಾಗಿರುವ ಕಾರಣ ಈ ರೀತಿಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ತಾಲ್ಲೂಕಿನ ಗ್ರಾಮೀಣ ಭಾಗದಲ್ಲೂ ಮಳೆ ಮುಂದುವರಿದಿದೆ.

ಇದನ್ನೂ ಓದಿ: ಭಾರಿ ಮಳೆ – ಕರಾವಳಿ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್‌’

ಕಾರವಾರ, ಅಂಕೋಲಾದಲ್ಲಿ ಬೆಳಿಗ್ಗೆಯಿಂದ ಜಿಟಿಜಿಟಿ ಮಳೆಯಾಗುತ್ತಿದ್ದು, ದಟ್ಟವಾದ ಮೋಡ ಕವಿದ ವಾತಾವರಣವಿದೆ.

ಭಟ್ಕಳದ ರಂಗಿನಕಟ್ಟೆ ಪ್ರದೇಶ ಸಂಪೂರ್ಣ ಜಲಾವೃತವಾಗಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರಕ್ಕೆ ಅಡಚಣೆಯಾಗಿದ್ದು, ವಾಹನಗಳು ಸಾಲುಗಟ್ಟಿ ನಿಂತಿವೆ. ಇದೇರೀತಿ, ಮೂಡುಭಟ್ಕಳ ಗ್ರಾಮವೂ ಸಂಪೂರ್ಣ ಜಲಾವೃತವಾಗಿದೆ.


ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವುದು

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು