ಬುಧವಾರ, ಜನವರಿ 27, 2021
21 °C
ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಸಭೆ

‘ರಾಮಮಂದಿರ ಶ್ರದ್ಧೆಯ ಸಂಕೇತ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲ್ಲಾಪುರ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಪ್ರತಿಯೊಬ್ಬ ಭಾರತೀಯನ ಶ್ರದ್ಧಾಭಕ್ತಿಯ ಸಂಕೇತವಾಗಿದ್ದು, ಈ ಮಂದಿರ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅತ್ಯಗತ್ಯವಾಗಿದೆ ಎಂದು ಶಿರಸಿ ವಿಭಾಗೀಯ ಪ್ರಚಾರಕ ಗಣೇಶ ತೆಕ್ಕಟ್ಟೆ ಹೇಳಿದರು.

ರಾಮಮಂದಿರಕ್ಕಾಗಿ ನಿಧಿ ಸಮರ್ಪಣಾ ಅಭಿಯಾನವನ್ನು ಇಡೀ ದೇಶದಲ್ಲಿ ಹಮ್ಮಿಕೊಂಡಿದ್ದು, ಅದರ ಅಂಗವಾಗಿ ತಾಲ್ಲೂಕಿನಲ್ಲಿ ನಡೆಯುವ ಅಭಿಯಾನಕ್ಕಾಗಿ ಭಾನುವಾರ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ರಾಷ್ಟ್ರೀಯ ಪ್ರಾಣಿ– ಪಕ್ಷಿ, ಸ್ಮಾರಕದ ಹಾಗೆ ರಾಮಮಂದಿರ ರಾಷ್ಟ್ರೀಯ ದೇವಾಲಯ ಎಂದೆನಿಸಿಕೊಳ್ಳಬೇಕು ಎಂದರು.

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಾಗೂ ಅಭಿಯಾನ ಸಮಿತಿ ಯಲ್ಲಾಪುರ ಇವುಗಳ ಆಶ್ರಯದಲ್ಲಿ ಈ ಅಭಿಯಾನ ನಡೆಯಲಿದ್ದು, ಸಭೆಯಲ್ಲಿ ಪ್ರತಿ ಪಂಚಾಯಿತಿವಾರು
ಸಮಿತಿಗಳನ್ನು ರಚಿಸಲಾಯಿತು. ನಿಧಿ ಸಂಗ್ರಹದ ವಿಧಾನದ ಕುರಿತು ಮಾಹಿತಿ ನೀಡಿ, ಯಾವುದೇ ಮನೆ ತಪ್ಪದಂತೆ ಜಾಗೃತಿ ವಹಿಸಬೇಕೆಂದು ಸೂಚಿಸಲಾಯಿತು.

ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎನ್.ಭಟ್ಟ ಏಕಾನ ಅಧ್ಯಕ್ಷತೆ ವಹಿಸಿದ್ದರು, ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣ (ನನ್ನಿ) ನಾಯಕ ವೇದಿಕೆಯಲ್ಲಿದ್ದರು. ತಾಲ್ಲೂಕು ಸಹಕಾರ್ಯವಾಹ ಡಿ.ಎಸ್.ಭಟ್ಟ ಸ್ವಾಗತಿಸಿದರು. ಗೋಪಾಲಕೃಷ್ಣ ಬರಗದ್ದೆ ನಿರೂಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.