ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಾಹ್ಮಣರ ಸಂಖ್ಯೆ ವ್ಯತ್ಯಾಸ: ಪುನರ್ ಪರಿಶೀಲನೆಗೆ ಒತ್ತಾಯ

Last Updated 24 ಜುಲೈ 2021, 16:24 IST
ಅಕ್ಷರ ಗಾತ್ರ

ಶಿರಸಿ: ರಾಜ್ಯದಲ್ಲಿ ಬ್ರಾಹ್ಮಣರ ಸಂಖ್ಯೆ 43 ಲಕ್ಷಕ್ಕೂ ಹೆಚ್ಚಿದೆ. ಆದರೆ, ಜಾತಿ ಗಣತಿಯಲ್ಲಿ ಕೇವಲ 17 ಲಕ್ಷ ಎಂದಿದೆ. ಬ್ರಾಹ್ಮಣರ ಸಂಖ್ಯೆ ದೃಢೀಕರಿಸಲು ಗಣತಿ ಮಾಹಿತಿ ಪುನರ್ ಪರಿಶೀಲನೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದಮೂರ್ತಿ ಹೇಳಿದರು.

ಶನಿವಾರ ಬ್ರಾಹ್ಮಣ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಬ್ರಾಹ್ಮಣರಲ್ಲಿ 44 ಉಪಪಂಗಡಗಳಿವೆ. ಗಣತಿ ವೇಳೆ ಸಮುದಾಯದವರು ತಮ್ಮ ಪಂಗಡ ನಮೂದಿಸಿದ್ದರೆ ವಿನಃ ಬ್ರಾಹ್ಮಣ ಎಂದು ನಮೂದಿಸಿಲ್ಲ. ಸರ್ಕಾರ ಇದನ್ನು ಮತ್ತೊಮ್ಮೆ ಪರಿಶೀಲಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದ 21 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಅಹಂಕಾರ ಬಿಟ್ಟು ನಾವೆಲ್ಲ ಒಗ್ಗಟ್ಟಾಗಿರಬೇಕು.ಬ್ರಾಹ್ಮಣತ್ವ ಉಳಿದರೆ, ಬ್ರಾಹ್ಮಣರು ಉಳಿಯುತ್ತಾರೆ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT