ಶಿರಸಿ ನಗರಸಭೆ: ಮೀಸಲಾತಿ ಬದಲಾವಣೆ:ಪರಿಶಿಷ್ಟ ಮಹಿಳೆಗೆ ಅಧ್ಯಕ್ಷ ಸ್ಥಾನ

ಶಿರಸಿ: ಇಲ್ಲಿನ ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಬದಲಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ನಿಗದಿಯಾಗಿದ್ದ ಅಧ್ಯಕ್ಷ ಸ್ಥಾನದ ಮೀಸಲಾತಿ ಹಿಂದುಳಿದ ವರ್ಗ ‘ಎ’ಯಿಂದ ಪರಿಶಿಷ್ಟ ಜಾತಿ ಮಹಿಳೆಗೆ ಬದಲಾಗಿದೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮುಂದುವರಿದಿದೆ.
ನಗರಸಭೆಯ 31 ಸ್ಥಾನಗಳಲ್ಲಿ ಒಟ್ಟು 17 ಸ್ಥಾನ ಗೆದ್ದು, ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ, ಎರಡು ಅವಧಿ ಸದಸ್ಯರಾಗಿ ಅನುಭವ ಹೊಂದಿರುವ 31ನೇ ವಾರ್ಡಿನ ಸದಸ್ಯ ಗಣಪತಿ ನಾಯ್ಕ ಅವರಿಗೆ ಅಧ್ಯಕ್ಷ ಸ್ಥಾನ ನೀಡಲು ನಿರ್ಧರಿಸಿತ್ತು. ಈಗ ಅಧ್ಯಕ್ಷ ಸ್ಥಾನದ ಮೀಸಲಾತಿ ಬದಲಾಗಿರುವುದು ಪಕ್ಷದಲ್ಲಿ ಗೊಂದಲ ಸೃಷ್ಟಿಸಿದೆ. ಹೊಸ ಮೀಸಲಾತಿಯಂತೆ ಮೊದಲ ಬಾರಿ ಸದಸ್ಯೆಯಾಗಿ ಆಯ್ಕೆಯಾಗಿರುವ ನಾಗರತ್ನಾ ಜೋಗಳೇಕರ ಅವರಿಗೆ ಅಧ್ಯಕ್ಷ ಸ್ಥಾನ ದೊರೆಯುವ ಸಾಧ್ಯತೆಯಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.