ಸೋಮವಾರ, ಡಿಸೆಂಬರ್ 16, 2019
17 °C

ಪ್ರತ್ಯೇಕ ಅಪಘಾತಗಳು: ಒಬ್ಬರ ಸಾವು, ಮೂವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಒಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೊನ್ನಾವರದ ಎಮ್ಮೆಪೈಲ್ ಸಮೀಪ ಕಾರು ಮತ್ತು ಲಾರಿ ಪರಸ್ಪರ ಡಿಕ್ಕಿಯಾಗಿವೆ. ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಕುಮಟಾ ಕಡೆಯಿಂದ ಹೊನ್ನಾವರದತ್ತ ಸಾಗುತ್ತಿತ್ತು. ಲಾರಿ ಭಟ್ಕಳದಿಂದ ಕುಮಟಾದತ್ತ ಬರುತ್ತಿತ್ತು.

ಗಾಯಗೊಂಡವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಹೊನ್ನಾವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಕಾರವಾರ ತಾಲ್ಲೂಕಿನ ಹಾರವಾಡದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಅಪಘಾತದಲ್ಲಿ ಕಾರೊಂದು ಕೆಎಸ್ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಅದೃಷ್ಟವಷಾತ್ ಯಾರಿಗೂ ಗಾಯವಾಗಿಲ್ಲ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು