ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಹ್ಯ ಗ್ರಾಮದ ರಸ್ತೆ ಸಂಪರ್ಕ ಬಂದ್ ಮಾಡಿದ ಗ್ರಾಮಸ್ಥರು

Last Updated 28 ಮಾರ್ಚ್ 2020, 14:15 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಸಿದ್ದಾಪುರ: ಗುಹ್ಯ ಗ್ರಾಮಕ್ಕೆ ತೆರಳುವ ರಸ್ತೆಯನ್ನು ಗ್ರಾಮಸ್ತರು ಬ್ಯಾರಿಕೇಟ್ ಬಳಸಿ ಬಂದ್ ಮಾಡಲಾಗಿದ್ದು, ಗ್ರಾಮದಲ್ಲಿ ಸಂಚಾರ ಸ್ಥಗಿತಗೊಂಡಿದೆ.

ಗುಹ್ಯ, ಕೂಡುಗದ್ದೆ ಮಸೀದಿ ಹಾಗೂ ಕಾವೇರಿ ಸೇತುವೆಯ ಬಳಿಯಲ್ಲಿ ಬ್ಯಾರಿಕೇಡ್ ಹಾಗೂ‌ ಮರದ ತುಂಡನ್ನು ಬಳಸಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಗ್ರಾಮದ ಜನರ ಹಿತದೃಷ್ಟಿಯಿಂದ ರಸ್ತೆ ಬಂದ್ ಮಾಡಲಾಗಿದ್ದು, ಗ್ರಾಮಸ್ಥರು ಮನೆಯಲ್ಲಿಯೇ ಇರಲು ಗ್ರಾಮದ ಹಿರಿಯರು ಸೂಚಿಸಿದ್ದಾರೆ.

ಜಿಲ್ಲಾಡಳಿತದ ನಿರ್ದೇಶನದಂತೆ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಅಗತ್ಯ ಸಾಮಗ್ರಿಗಳನ್ನು ಖರೀದಿಸಲು ಅವಕಾಶವಿದ್ದು, ಅಂದು ಮಾತ್ರ ಬ್ಯಾರಿಕೇಡ್ ತೆರವುಗೊಳಿಸಲಾಗುವುದು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿದ್ದಾಪುರ ಪಟ್ಟಣ ಸಂಪೂರ್ಣ ಬಂದ್ ಆಗಿದ್ದು, ಹಾಲು, ಮೆಡಿಕಲ್ ಹೊರತುಪಡಿಸಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿತ್ತು.

ಸಿದ್ದಾಪುರ ಠಾಣಾಧಿಕಾರಿ ಬೋಜಪ್ಪ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ‌. ಕೊಂಡಂಗೇರಿಯಲ್ಲಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ನಲ್ಲಿ ಭದ್ರತೆ ಮುಂದುವರಿಸಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ಜನರ ಆರೋಗ್ಯ ತಪಾಸಣಾ ಕಾರ್ಯವನ್ನು ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT