ಸೋಮವಾರ, ಏಪ್ರಿಲ್ 19, 2021
33 °C

ಪೊಲೀಸರಿಂದ 13 ಕೋಣಗಳ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಕಸಾಯಿಖಾನೆಗೆ ಸಾಗಿಸುತ್ತಿದ್ದರೆನ್ನಲಾದ 13 ಕೋಣಗಳನ್ನು ತಾಲ್ಲೂಕಿನ ಬನವಾಸಿ ಠಾಣೆಯ ಪೊಲೀಸರು ಶನಿವಾರ ರಕ್ಷಿಸಿದ್ದಾರೆ.

ಈ ಸಂಬಂಧ ಆರೋಪಿಗಳಾದ ಬೆಂಗಳೂರಿನ ವೆಂಕಟೇಶ ಮುನಿಯಪ್ಪ, ಚಿಕ್ಕಬಳ್ಳಾಪುರದ ಅಹ್ಮದ್ ಅಜೀಮ್ ಸಾಬ್, ಆಂಧ್ರಪ್ರದೇಶದ ಬಶೀರ್‌ ಫರ್ಕುದ್ದೀನ್ ಸಾಬ್, ವಲಿ ಶೇಖ್ ಎಂಬುವವರನ್ನು ಬಂಧಿಸಿದ್ದಾರೆ.

ಮುಂಬೈನಿಂದ ಭಟ್ಕಳಕ್ಕೆ ಈ ಕೋಣಗಳನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ, ದಾಸನಕೊಪ್ಪ ಚೆಕ್‌ಪೋಸ್ಟ್‌ನಲ್ಲಿ ಸಾಗಾಟಕ್ಕೆ ಬಳಸಿದ್ದ ಲಾರಿಯ ತಪಾಸಣೆ ನಡೆಸುವ ವೇಳೆ ಈ ಸಂಗತಿ ಗೊತ್ತಾಗಿದೆ. ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು