ಶನಿವಾರ, ಅಕ್ಟೋಬರ್ 24, 2020
27 °C

ಬಾಕಿ ಅನುದಾನ ಬಿಡುಗಡೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಜಿಲ್ಲೆಯ ಎಂಡೊಸಲ್ಫಾನ್ ಪೀಡಿತರ ಪುನರ್ವಸತಿ ಕಾರ್ಯದಲ್ಲಿ ತೊಡಗಿಕೊಂಡಿರುವ ಸಂಚಾರಿ ಆರೋಗ್ಯ ಘಟಕಗಳಿಗೆ ಏಳು ತಿಂಗಳಿನಿಂದ ಬಾಕಿಯಿರುವ ಸೇವಾ ವೆಚ್ಚವನ್ನು ಪಾವತಿಸಬೇಕು. ಘಟಕಗಳ ಸೇವೆಯನ್ನು ಮುಂದುವರಿಸುವ ಬಗ್ಗೆ ಇರುವ ಗೊಂದಲ ನಿವಾರಿಸಬೇಕು ಎಂದು ಶಿರಸಿಯ ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ.ವೆಂಕಟೇಶ ಎಲ್.ನಾಯ್ಕ ಒತ್ತಾಯಿಸಿದ್ದಾರೆ.

ಈ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ಶನಿವಾರ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜಿಲ್ಲೆಯ ಆರು ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಎರಡೂವರೆ ವರ್ಷಗಳಿಂದ ನಾಲ್ಕು ಸಂಚಾರಿ ಆರೋಗ್ಯ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಈವರೆಗೆ 75 ಸಾವಿರ ಮಂದಿಗೆ ಆರೋಗ್ಯ ಸೇವೆ ನೀಡಲಾಗಿದೆ’ ಎಂದು ವಿವರಿಸಿದರು.

‘ಪ್ರತಿ ಘಟಕದಲ್ಲಿ ತಲಾ ಆರು ಸಿಬ್ಬಂದಿಯಿದ್ದಾರೆ. ಪ್ರತಿ ತಿಂಗಳು ಪಾವತಿಸಬೇಕಾದ ಆರೋಗ್ಯ ಅನುದಾನವನ್ನು ಏಳು ತಿಂಗಳಿನಿಂದ ಬಿಡುಗಡೆ ಮಾಡಿಲ್ಲ. ಇದರಿಂದ ಘಟಕಗಳ ನಿರ್ವಹಣೆಗೆ ತೊಂದರೆಯಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದು, ಸರ್ಕಾರದ ಗಮನಕ್ಕೆ ತರುವುದಾಗಿ ತಿಳಿಸಿದ್ದಾರೆ. ಅವರ ಮಾತಿಗೆ ಬೆಲೆ ನೀಡಿ, ಕೋವಿಡ್ ಸಂದರ್ಭದಲ್ಲಿ ಸೇವೆ ಮುಂದುವರಿಸುತ್ತೇವೆ. ಪ್ರತಿ ಬಾರಿ ಅನುದಾನ ನೀಡುವ ಸಂದರ್ಭದಲ್ಲಿ ಈ ರೀತಿ ಆಗುತ್ತಿದೆ. ಇದಕ್ಕೊಂದು ಕಾಯಂ ಪರಿಹಾರ ಬೇಕಿದೆ’ ಎಂದು ಒತ್ತಾಯಿಸಿದರು.

ಎಂಡೊಸಲ್ಫಾನ್ ಸಂಚಾರಿ ಆರೋಗ್ಯ ಘಟಕಗಳ ವೈದ್ಯಕೀಯ ಸಿಬ್ಬಂದಿಯೂ ಹಾಜರಿದ್ದರು. ಜಿಲ್ಲಾ ಪಂಚಾಯ್ತಿ ಮುಖ್ಯ
ಕಾರ್ಯ ನಿರ್ವಹಣಾ ಅಧಿಕಾರಿ ಮೊಹಮ್ಮದ್ ರೋಶನ್ ಹಾಗೂ ಶಾಸಕಿ ರೂಪಾಲಿ ನಾಯ್ಕ ಅವರಿಗೂ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.