ಗುರುವಾರ , ಆಗಸ್ಟ್ 11, 2022
23 °C

ತಿಳಿ ಹಸಿರು ಬಣ್ಣಕ್ಕೆ ತಿರುಗಿದ ಸಮುದ್ರ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ನಗರದ ಬೈತಖೋಲ್ ಮೀನುಗಾರಿಕಾ ಬಂದರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಎರಡು ದಿನಗಳಿಂದ ಸಮುದ್ರದ ನೀರು ತಿಳಿ ಹಸಿರು ಬಣ್ಣಕ್ಕೆ ತಿರುಗಿದೆ. ಇದು ಮೀನುಗಾರರು ಮತ್ತು ಸ್ಥಳೀಯರ ಕುತೂಹಲಕ್ಕೆ ಕಾರಣವಾಗಿದೆ.

ಪ್ರತಿವರ್ಷವೂ ಮಳೆಗಾಲ ಮುಗಿದು ಸುಮಾರು ಒಂದು ತಿಂಗಳ ನಂತರ ಇಂತಹ ವಿದ್ಯಮಾನ ಕಂಡುಬರುತ್ತದೆ. ಸಮೀಪದ ಗೋವಾ ಭಾಗದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸಮುದ್ರದಲ್ಲಿ ನೀರು ಹಸಿರಾದ ಬಗ್ಗೆ ವರದಿಯಾಗಿತ್ತು.

ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಗರದ ಕಡಲಜೀವ ವಿಜ್ಞಾನ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಶಿವಕುಮಾರ ಹರಗಿ, ‘ಕೆಲವು ದಿನಗಳಿಂದ ಈ ಭಾಗದಲ್ಲಿ ಪ್ಲಾಂಕ್ಟನ್‌ಗಳೆಂಬ ಸೂಕ್ಷ್ಮಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಇವು ಒಂದೇ ಕಡೆ ಭಾರಿ ಸಂಖ್ಯೆಯಲ್ಲಿ ಸೇರಿದಾಗ ನೀರಿನ ಬಣ್ಣ ಬದಲಾಗುತ್ತದೆ. ನೀರಿನ ಹರಿವು ಶುರುವಾದಾಗ ತಿಳಿಯಾಗುತ್ತದೆ’ ಎಂದು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು