ಮಂಗಳವಾರ, ಆಗಸ್ಟ್ 3, 2021
27 °C

ಮೃತ ಹಿರಿಯ ವ್ಯಕ್ತಿಗೆ ಕೋವಿಡ್ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಟ್ಕಳ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪಟ್ಟಣದ 69 ವರ್ಷದ ವ್ಯಕ್ತಿಯೊಬ್ಬರು ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಮರಣಾನಂತರ ಗಂಟಲು ದ್ರವವನ್ನು ಪರೀಕ್ಷಿಸಿದಾಗ ಅವರಲ್ಲಿ ಕೋವಿಡ್ 19 ದೃಢಪಟ್ಟಿದೆ.

ಪಟ್ಟಣದ ಸುಲ್ತಾನ್ ರಸ್ತೆ‌ ನಿವಾಸಿಯಾಗಿರುವ ಅವರು, ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಕುಟುಂಬದವರು ಶನಿವಾರ ರಾತ್ರಿ ಮುರ್ಡೇಶ್ವರದ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಕರೆದುಕೊಂಡು ಬಂದಿದ್ದರು. ಆದರೆ, ರಾತ್ರಿ 12 ಗಂಟೆ ಸುಮಾರಿಗೆ ಉಸಿರಾಟದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿ ಮೃತಪಟ್ಟರು.

ಮೃತದೇಹದ ಗಂಟಲು ದ್ರವದ ಮಾದರಿಯನ್ನು ಭಾನುವಾರ ಬೆಳಿಗ್ಗೆ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿಯು ಮಧ್ಯಾಹ್ನ ಬಂದಿದ್ದು, ಕೋವಿಡ್ 19 ದೃಡಪಟ್ಟಿದೆ. ಮೃತದೇಹವನ್ನು ಪಿ.ಪಿ.ಇ ಬ್ಯಾಗ್‌ನಲ್ಲಿ ಭದ್ರಪಡಿಸಿ ನಾಲ್ವರು ಪೌರ ಕಾರ್ಮಿಕರು ತೆಗೆದುಕೊಂಡು ಹೋದರು. ಕುಟುಂಬದ ನಾಲ್ವರು ಸದಸ್ಯರ ಸಮ್ಮುಖದಲ್ಲಿ, ಪೌರ ಸಮಾಧಿ ಮಾಡುವ ಸ್ಥಳದಲ್ಲಿ ಸೋಂಕು ನಿವಾರಕ ಸಿಂಪಡಿಸಿ ಅಂತ್ಯಕ್ರಿಯೆ ನಡೆಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪುರಸಭೆ ಅಧಿಕಾರಿಗಳೂ ಹಾಜರಿದ್ದರು.

‘ಮೃತರ ಕುಟುಂಬದವರು ಹಾಗೂ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕಿ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಮೃತರು ಇದ್ದ ಸುತ್ತಮುತ್ತಲಿನ ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗುತ್ತದೆ’ ಎಂದು ಉಪ ವಿಭಾಗಾಧಿಕಾರಿ ಎಸ್.ಭರತ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು