ಬುಧವಾರ, ಫೆಬ್ರವರಿ 24, 2021
26 °C

ಕಾರು, ಲಾರಿ, ಟ್ಯಾಂಕರ್ ಸರಣಿ ಅಪಘಾತ: ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭಾನುವಾರ ಕಾರು, ಲಾರಿ ಹಾಗೂ ಟ್ಯಾಂಕರ್ ನಡುವೆ ಸರಣಿ ಅಪಘಾತ ನಡೆದು, ಎರಡು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಸಿಮೆಂಟ್ ತುಂಬಿಕೊಂಡು.ಅಂಕೋಲಾ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು, ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಿತು. ಇದರ ಪರಿಣಾಮ ನಜ್ಜುಗುಜ್ಜಾದ ಟ್ಯಾಂಕರಿನಲ್ಲಿ ಸಿಲುಕಿಕೊಂಡಿದ್ದ ಚಾಲಕನನ್ನು ಹರ ಸಾಹಸ ಪಟ್ಟು ಹೊರ ತೆಗೆಯಲಾಯಿತು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.

ಅಪಘಾತಗೊಂಡ ಲಾರಿಗಳು ಹೆದ್ದಾರಿಗೆ ಅಡ್ಡಲಾಗಿ ನಿಂತ ಪರಿಣಾಮ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯ ಎರಡೂ ಬದಿಗಳಲ್ಲಿ  ಸುಮಾರು ಎರಡು ಕಿಲೋಮೀಟರ್ ದೂರದವರೆಗೆ ಎರಡು ಸಾಲುಗಳಲ್ಲಿ ವಾಹನಗಳು ನಿಂತಿದ್ದವು.
 
ಯಲ್ಲಾಪುರ ಪೊಲೀಸರು ಸ್ಥಳಕ್ಕೆ ತೆರಳಿ ಕ್ರೇನ್ ಮೂಲಕ ಟ್ಯಾಂಕರ್ ಮತ್ತು ಲಾರಿಯನ್ನು ಬದಿಗೆ ಸರಿಸಿದ ನಂತರದಲ್ಲಿ ಸಂಚಾರ ಆರಂಭಗೊಂಡಿತು. ಸರಣಿ ರಜೆಯ ಕಾರಣಕ್ಕೆ ನೂರಾರು ವಾಹನಗಳಲ್ಲಿ ಬಂದಿದಗದ ಪ್ರವಾಸಿಗರು ಸಂಚಾರ ಸ್ಥಗಿತದಿಂದ ಪರದಾಡುವಂತಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು