ಸೋಮವಾರ, ಅಕ್ಟೋಬರ್ 26, 2020
29 °C

ಶಿರಸಿ: ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ವಿಧಾನ ಸಭಾಧ್ಯಕ್ಷರ ಕಚೇರಿ ಎದುರು ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಶಿರಸಿ ಪ್ರತ್ಯೇಕ ಜಿಲ್ಲೆ ಹಾಗೂ ಬನವಾಸಿ ಹೊಸ ತಾಲ್ಲೂಕು ರಚನೆಗೆ ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿಯವರು ಸೋಮವಾರ ನಗರದಲ್ಲಿರುವ ವಿಧಾನ ಸಭಾಧ್ಯಕ್ಷ  ವಿಶ್ವೇಶ್ವರ ಹೆಗಡೆ ಕಾಗೇರಿ ಅವರ  ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೆಲದಿನಗಳ ಹಿಂದೆ ಪತ್ರ ಚಳುವಳಿ ಆರಂಭಿಸಿದ್ದ ಸಮಿತಿ ಈಗ ವಿಧಾನ ಸಭಾಧ್ಯಕ್ಷರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆ ರಚನೆಗೆ ಒತ್ತಾಯಿಸಿ ಘೋಷಣೆ ಕೂಗಲಾಯಿತು.

ಬನವಾಸಿ ತಾಲ್ಲೂಕಾಗಲು ಅರ್ಹತೆ ಹೊಂದಿದ್ದು, ಜಿಲ್ಲೆಯ ಘಟ್ಟದ ಮೇಲಿನ ತಾಲ್ಲೂಕುಗಳನ್ನು ಸೇರಿಸಿ ಹೊಸ ಜಿಲ್ಲೆ ಹಾಗೂ ಬನವಾಸಿ ಹೊಸ ತಾಲ್ಲೂಕು ರಚನೆಗೆ ಜನಪ್ರತಿನಿಧಿಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು. ಕಾಗೇರಿ ಅವರ ನಾಯಕತ್ವದಲ್ಲೇ ಈ ಕೆಲಸವಾಗಲಿ ಎಂದು ಒತ್ತಾಯಿಸಿದರು.

ಸಮಿತಿಯ ಉಪೇಂದ್ರ ಪೈ, ಮಂಜು ಮೊಗೇರ, ಎಮ್.ಎಮ್.ಭಟ್ಟ, ಪವಿತ್ರಾ ಹೊಸೂರು, ಪರಮಾನಂದ ಹೆಗಡೆ ಇನ್ನಿತರರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು