ಬುಧವಾರ, ಡಿಸೆಂಬರ್ 2, 2020
16 °C

ಉಗ್ರ ಸಂಘಟನೆಗಳ ಜೊತೆ ನಂಟು ಆರೋಪ: ಶಿರಸಿ ಯುವಕನ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದಡಿ ಶಿರಸಿ ನಗರಕ್ಕೆ ಸಮೀಪದ ಗ್ರಾಮದ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ನಸುಕಿನ ಜಾವ ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ.

ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರೊಬ್ಬರ ಮಗ ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಎಂಬಾತನನ್ನು ಬಂಧಿಸಲಾಗಿದೆ. ಈತ ಪಾಕಿಸ್ತಾನದಿಂದ ಕಾರ್ಯನಿರ್ವಹಿಸಿದ ಉಗ್ರ ಸಂಘಟನೆಯೊಂದರ ಸದಸ್ಯರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ. ಅಲ್ಲದೆ ನಿರಂತರ ವಾಟ್ಸಾಪ್ ಚಾಟಿಂಗ್ ಕೂಡ ನಡೆಸಿದ್ದ ಎಂಬ ಆರೋಪವಿದೆ. 

ಈ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ಕಳೆದ ತಿಂಗಳು ಎರಡು ಬಾರಿ ಯುವಕನ ವಿಚಾರಣೆ ನಡೆಸಿದ್ದರು. ನಂಟು ಹೊಂದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ಶಿರಸಿಗೆ ಆಗಮಿಸಿದ್ದ ಎನ್ಐಎ ತಂಡ ಯುವಕನನ್ನು ಬಂಧಿಸಿ ಬುಧವಾರ ನಸುಕಿನ ಜಾವ ಕರೆದೊಯ್ದಿದೆ. ಈ ಮಾಹಿತಿಯನ್ನು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು