ಮಂಗಳವಾರ, ಜನವರಿ 19, 2021
22 °C

ಯಲ್ಲಾಪುರ: ಪೊಲೀಸ್ ವ್ಯಾನ್ ಪಲ್ಟಿಯಾಗಿ 16 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲ್ಲಾಪುರ: ತಾಲ್ಲೂಕಿನ ಪ್ರವಾಸಿ ತಾಣಗಳನ್ನು ನೋಡಲು ಬಂದಿದ್ದ ಹಾವೇರಿ ಪೊಲೀಸರ ವ್ಯಾನ್‌, ಮುಂಡಗೋಡ ರಸ್ತೆಯ ಕುಚಗಾಂವ್ ಬಳಿಯ ತಿರುವಿನಲ್ಲಿ ಶುಕ್ರವಾರ ಪಲ್ಟಿಯಾಗಿದ್ದರಿಂದ 16 ಜನ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ಸಂಭವಿಸಿದೆ. ಗಾಯಗೊಂಡವರಿಗೆ ಯಲ್ಲಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ.

ಪೊಲೀಸ್ ಇಲಾಖೆಯ ಹಾವೇರಿಯ ಡಿ.ಪಿ.ಒ ಸಿಬ್ಬಂದಿ ತಮ್ಮ ಕುಟುಂಬ ಸಮೇತರಾಗಿ ಯಲ್ಲಾಪುರದ ಚಂದಗುಳಿ ಗಂಟೆ ಗಣಪತಿ, ಹಾಗೂ ಇತರ ಪ್ರವಾಸಿ ತಾಣಗಳಿಗೆ ಪ್ರವಾಸಕ್ಕೆ ಬಂದಿದ್ದರು. ವ್ಯಾನ್‌ನಲ್ಲಿ ಮಹಿಳೆಯರೂ ಸೇರಿದಂತೆ 20ಕ್ಕೂ ಹೆಚ್ಚು ಜನರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು