ಗುರುವಾರ , ಜುಲೈ 29, 2021
26 °C

ಅಂಕೋಲಾ: ಕೆನರಾ ಬ್ಯಾಂಕ್ ಶಾಖೆಯಲ್ಲಿ ಆಕಸ್ಮಿಕ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಂಕೋಲಾ: ಪಟ್ಟಣದ ಸುಂದರ ನಾರಾಯಣ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯ ಯು.ಪಿ.ಎಸ್ ಕೊಠಡಿಯಲ್ಲಿ ಮಂಗಳವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡು ಆತಂಕ ಉಂಟುಮಾಡಿತು.

ಗಾಬರಿಗೊಂಡ ಬ್ಯಾಂಕ್ ಸಿಬ್ಬಂದಿ ತಕ್ಷಣ ಅಗ್ನಿಶಾಮಕ ಠಾಣೆಗೆ ವಿಷಯ ತಿಳಿಸಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ತಂಡದವರು ಕೇವಲ 10 ನಿಮಿಷಗಳಲ್ಲಿ ಬೆಂಕಿ ಆರಿಸಿ ಸಂಭಾವ್ಯ ದೊಡ್ಡ ಅನಾಹುತವನ್ನು ತಪ್ಪಿಸಿದರು.

ರಸ್ತೆ ಮೇಲಿನ ವಿದ್ಯುತ್ ತಂತಿಯ ಮೇಲೆ ಮರದ ಟೊಂಗೆ ಬಿದ್ದ ಪರಿಣಾಮ ವಿದ್ಯುತ್ ಸಂಚಾರದಲ್ಲಿ ಏರುಪೇರು ಉಂಟಾಗಿತ್ತು. ಈ ಕಾರಣದಿಂದ ಬೆಂಕಿ ತಗಲಿರಬಹುದು ಎನ್ನಲಾಗಿದೆ. ಕೊಠಡಿಯಲ್ಲಿದ್ದ ಯು.ಪಿ.ಎಸ್ ಚಾರ್ಜರ್ ಸುಟ್ಟುಹೋಗಿದ್ದು ಅಂದಾಜು ₹ 40 ಸಾವಿರ ಹಾನಿ ಸಂಭವಿಸಿದೆ. ಕೊಠಡಿಯಲ್ಲಿ ಯು.ಪಿ.ಎಸ್ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ಉಪಕರಣಗಳಿದ್ದು, ಹೆಚ್ಚಿನ ಹಾನಿ ಸಂಭವಿಸಿಲ್ಲ.

ಅಗ್ನಿಶಾಮಕ ದಳದ ಠಾಣಾಧಿಕಾರಿ ಉಮೇಶ ನಾಯ್ಕ, ಸಿಬ್ಬಂದಿ ಗಜಾನನ ನಾಯ್ಕ, ಗಣೇಶ ಶೇಟ್, ಗಣೇಶ ನಾಯ್ಕ, ಜೀವನ ಬಬ್ರುಕರ, ಅಮಿತ್ ನಾಯ್ಕ ಮತ್ತು ಬ್ಯಾಂಕ್ ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು