‘ಮರಳಿನ ಸಮಸ್ಯೆ ಕೂಡಲೇ ಬಗೆಹರಿಸಿ’

7
ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ

‘ಮರಳಿನ ಸಮಸ್ಯೆ ಕೂಡಲೇ ಬಗೆಹರಿಸಿ’

Published:
Updated:
Deccan Herald

ದಾಂಡೇಲಿ: ‘ಮರಳಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ, ಕಾನೂನಾತ್ಮಕ ಪೂರೈಕೆಗೆ ಅನುವು ಮಾಡಿಕೊಡಲು ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ವಿವಿಧ ಗುತ್ತಿಗೆದಾರರ ಸಂಘಗಳ ನೇತೃತ್ವದಲ್ಲಿ ಕಟ್ಟಡ ನಿರ್ಮಾಣ ಕೂಲಿ ಕಾರ್ಮಿಕರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಕೆ.ಸಿ.ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯ ನೇತೃತ್ವವನ್ನು ದಾಂಡೇಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟ, ಕೆನರಾ ಲೋಕೋಪಯೋಗಿ ಗುತ್ತಿಗೆದಾರರ ಸಂಘ, ಲಾರಿ ಹಾಗೂ ಶ್ರೀದಾಂಡೇಲಪ್ಪ ಜಲ್ಲಿ ಮತ್ತು ಮರಳು ಮಾರಾಟಗಾರರ ಸಂಘ ವಹಿಸಿಕೊಂಡಿತ್ತು.

ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ವಿಶೇಷ ತಹಶೀಲ್ದಾರ್ ಶೈಲೇಶ ಪರಮಾನಂದ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ರವಾನಿಸಲಾಯಿತು. 

ಕೆನರಾ ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೈಯದ್ ತಂಗಳ ಮಾತನಾಡಿ, ‘ಜೂನ್ ತಿಂಗಳಿನಿಂದ ಮರಳಿನ ಸಮಸ್ಯೆ ತೀವ್ರವಾಗಿದೆ. ಇದರಿಂದಾಗಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಕೂಲಿಯನ್ನೇ ನಂಬಿರುವ ಬಡ ಕೂಲಿಕಾರ್ಮಿಕರು ಸಂಕಷ್ಟಕ್ಕೆ ತುತ್ತಾಗಿದ್ದಾರೆ’ ಎಂದು ತಿಳಿಸಿದರು.

ದಾಂಡೇಲಿ ಕಟ್ಟಡ ನಿರ್ಮಾಣ ಕಾರ್ಮಿಕರ ಮತ್ತು ಗುತ್ತಿಗೆದಾರರ ಒಕ್ಕೂಟದ ಅಧ್ಯಕ್ಷ ರಾಜೇಸಾಬ ಕೇಸನೂರು, ‘ತ್ವರಿತಗತಿಯಲ್ಲಿ ಮರಳಿನ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದರು.

ಪ್ರಮುಖರಾದ ಬಿ.ಎಲ್.ಲಮಾಣಿ, ಮಹೇಶ ಸಾವಂತ, ಗೌಸ್ ಕಿತ್ತೂರು, ಅನಿಲ ಕೇರವಾಡಕರ, ಸಿದ್ದು ಕಲಶೆಟ್ಟಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಕಟ್ಟಡ ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !