ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ, ಸಿದ್ದಾಪುರ ಆಸ್ಪತ್ರೆ ಸುಧಾರಣೆಗೆ ಕ್ರಮ

Last Updated 9 ಜನವರಿ 2020, 14:59 IST
ಅಕ್ಷರ ಗಾತ್ರ

ಶಿರಸಿ: ಶಿರಸಿ ಮತ್ತು ಸಿದ್ದಾಪುರ ಆಸ್ಪತ್ರೆಗಳ ಸುಧಾರಣೆಗೆ ಸಂಬಂಧಿಸಿ ಒಂದು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರಿನಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಹೆಚ್ಚುತ್ತಿರುವ ರೋಗಿಗಳ ಸಂಖ್ಯೆಗೆ ತಕ್ಕಂತೆ ಅಗತ್ಯ ಮೂಲ ಸೌಕರ್ಯ, ತಜ್ಞ ವೈದ್ಯರು, ಕಟ್ಟಡ, ಯಂತ್ರೋಪಕರಣ, ಸಿಬ್ಬಂದಿ ಮೊದಲಾದ ವಿಷಯಗಳನ್ನು ಚರ್ಚಿಸಲಾಯಿತು. ಶಿರಸಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚಿಸಬೇಕು. ಶಿರಸಿ ಮತ್ತು ಸಿದ್ದಾಪುರ ತಾಲ್ಲೂಕುಗಳ ಅಗತ್ಯಕ್ಕೆ ಸಂಬಂಧಿಸಿ, ವಾರದ ಒಳಗೆ ಪ್ರತ್ಯೇಕ ಸಭೆ ಕರೆದು, ಪ್ರಸ್ತಾವ ಸಲ್ಲಿಸಬೇಕು ಎಂದು ಕಾಗೇರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕಕುಮಾರ್ ಅವರಿಗೆ ಹೇಳಿದರು.

ಸಭೆಯಲ್ಲಿ ಚರ್ಚಿಸಿದ ಎಲ್ಲ ವಿಷಯಗಳ ಬಗ್ಗೆ ಕಾಗೇರಿ, ಆರೋಗ್ಯ ಸಚಿವ ಶ್ರೀರಾಮುಲು ಜೊತೆ ಮಾತನಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಅಗತ್ಯ ಪ್ರಸ್ತಾವ ತರಿಸಿಕೊಂಡು, ಶೀಘ್ರ ಅನುಮೋದನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಆಯುಕ್ತ ಪಂಕಜ್ ಕುಮಾರ್ ಪಾಂಡೆ, ನಿರ್ದೇಶಕ ಓಂಪ್ರಕಾಶ ಪಾಟೀಲ, ಮುಖ್ಯ ಆಡಳಿತಾಧಿಕಾರಿ ಕಾತ್ಯಾಯಿನಿ ದೇವಿ, ವೈದ್ಯಕೀಯ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಆರ್.ಶ್ರೀನಿವಾಸ ಇದ್ದರು ಎಂದು ಸ್ಪೀಕರ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT