ಮಂಗಳವಾರ, ಮಾರ್ಚ್ 9, 2021
19 °C

ಶಿರಸಿ: ಕೋವಿಶೀಲ್ಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ನಗರದ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೋವಿಶೀಲ್ಡ್ ಲಸಿಕೆ ವಿತರಣೆ ಆಬಿಯಾನಕ್ಕೆ ಚಾಲನೆ ನೀಡಿದರು. ಆಸ್ಪತ್ರೆಯ ಸಿಬ್ಬಂದಿ ಮಾದೇವಿ ತೋಟದ್ ಮೊದಲ ಲಸಿಕೆ ಪಡೆದರು.

ಚಾಲನೆ ನೀಡಿದ ಬಳಿಕ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಕೊರೊನಾ ವಿರುದ್ಧದ ಹೋರಾಟ ಬಲಗೊಂಡಂತಾಗಿದೆ. ಲಸಿಕೆ ವಿರುದ್ಧ ಹರಡುವ ವದಂತಿಗೆ ಜನ ಕಿವಿಗಿಡಬಾರದು’ ಎಂದರು.

‘ಪ್ರತಿಯೊಬ್ಬರಿಗೂ ಲಸಿಕೆ ಸಿಗಬೇಕು ಎಂಬುದು ಕೇಂದ್ರ ಸರ್ಕಾರದ ಗುರಿ. ಪ್ರಧಾನಿ ನರೇಂದ್ರ ಮೋದಿ ಈ ದಿಶೆಯಲ್ಲಿ ದೃಢ ಹೆಜ್ಜೆ ಇಟ್ಟಿದ್ದಾರೆ’ ಎಂದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್, ಕೋವಿಶೀಲ್ಡ್ ಲಸಿಕಾ ಅಭಿಯಾನದ ಡಾ.ಸೀನಪ್ಪ, ಪೌರಾಯುಕ್ತ ರಮೇಶ ನಾಯ್ಕ, ಡಿವೈಎಸ್ಪಿ ರವಿ ಡಿ.ನಾಯ್ಕ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ಪಂಡಿತ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಗಜಾನನ ಭಟ್ಟ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ,

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು