ಶುಕ್ರವಾರ, ಮೇ 27, 2022
28 °C

ಪರಿಷತ್ ಚುನಾವಣೆ: ಆತ್ಮಾವಲೋಕನ ನಡೆಯಲಿ ಎಂದ ವಿಶ್ವೇಶ್ವರ ಹೆಗಡೆ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಪ್ರಸ್ತುತ ವಿಧಾನ ಪರಿಷತ್ ಚುನಾವಣೆ ನಡೆದ ರೀತಿಯ ಬಗ್ಗೆ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡವರೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಶುಕ್ರವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಣ ಬಲದ ಮೇಲೆ ಪರಿಷತ್ ಚುನಾವಣೆ ನಡೆದಿರುವ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಪರಿಷತ್‍ ದೇಗುಲವಿದ್ದಂತೆ. ಇಲ್ಲಿಗೆ ಸದಸ್ಯರಾಗಿ  ಪ್ರವೇಶಿಸುವವರ ಜವಾಬ್ದಾರಿ, ಘನತೆ ಹೆಚ್ಚಿದೆ. ಇದೇ ಸ್ಥಿತಿ ಮುಂದುವರೆಯಬೇಕು ಕಲುಷಿತವಾಗಬಾರದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆತ್ಮವಿಮರ್ಶೆ ಮಾಡಿಕೊಂಡು ವ್ಯವಸ್ಥೆ ಸುಧಾರಣೆಗೆ ಪ್ರಯತ್ನಿಸಬೇಕು. ಈ ಕುರಿತು ಸೌಹಾರ್ದಯುತ ಚರ್ಚೆಗಳು ನಡೆಯಬೇಕು’ ಎಂದು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು