ಮಂಗಳವಾರ, ಮೇ 24, 2022
26 °C

ಕೇವಲ ಪ್ರಚಾರಕ್ಕಾಗಿ ಕುಮಾರಸ್ವಾಮಿ ಹೇಳಿಕೆ: ಸಚಿವ ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ‘ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುವುದು ಬೇಡ. ಕೇವಲ ಪ್ರಚಾರಕ್ಕಾಗಿ ಹೇಳಿಕೆಗಳನ್ನು ಕೊಡುವುದು ಅವರಿಗೆ ಶೋಭೆ ತರುವುದಿಲ್ಲ’ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದರು.

‘ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆಯೋ ಗೊತ್ತಿಲ್ಲ’ ಎಂದು ಕುಮಾರಸ್ವಾಮಿ ಸೋಮವಾರ ಟ್ವೀಟ್ ಮಾಡಿದ್ದರು.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಶ್ರೀರಾಮುಲು, ‘ನಮ್ಮ ದೇಶದಲ್ಲಿ ಹಿಟ್ಲರ್ ಆಡಳಿತ ಬಂದಿಲ್ಲ. ಮುಂದೆಯೂ ಬರಲು ನಮ್ಮ ಸರ್ಕಾರ ಬಿಡುವುದಿಲ್ಲ. ಆಧಾರವಿಲ್ಲದೇ ಅವರು ಕೊಡುತ್ತಿರುವ ಹೇಳಿಕೆಗಳಲ್ಲಿ ಸತ್ಯವಿಲ್ಲ. ಅವರ ಮನಸ್ಸಲ್ಲೂ ರಾಮಮಂದಿರ ಆಗಬೇಕು ಎಂದಿದೆ. ಅವರ ಪಕ್ಷದ ಶಾಸಕರೇ ದೇಣಿಗೆ ಕೊಟ್ಟಿದ್ದಾರೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು