ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭ

Last Updated 28 ಮಾರ್ಚ್ 2022, 4:45 IST
ಅಕ್ಷರ ಗಾತ್ರ

ಕಾರವಾರ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಸೋಮವಾರ ಆರಂಭವಾಗಿದ್ದು, ವಿದ್ಯಾರ್ಥಿಗಳು ಪ್ರಥಮ ಭಾಷೆಯ ಪರೀಕ್ಷೆ ಬರೆಯುತ್ತಿದ್ದಾರೆ. ಕಾರವಾರದಲ್ಲಿ ಪರೀಕ್ಷಾ ಕೊಠಡಿಗಳಿಗೆ ವಿದ್ಯಾರ್ಥಿಗಳನ್ನು ಕಳುಹಿಸುವ ಮೊದಲು ಕೋವಿಡ್ ನಿಯಮಾವಳಿಗಳನ್ನು ಅನುಸರಿಸಲಾಯಿತು.

ವಿದ್ಯಾರ್ಥಿಗಳ ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ, ಥರ್ಮಲ್ ಸ್ಕ್ಯಾನರ್‌ನಲ್ಲಿ ದೇಹದ ಉಷ್ಣಾಂಶ ಪರಿಶೀಲಿಸಲಾಯಿತು. ಈ ಪ್ರಕ್ರಿಯೆಗಾಗಿ ವಿದ್ಯಾರ್ಥಿಗಳನ್ನು ಸಾಕಷ್ಟು ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪಾಲಕರು ಕರೆದುಕೊಂಡು ಬಂದರು.

ಉತ್ತರ ಕನ್ನಡದಲ್ಲಿ ಒಟ್ಟು 86 ಕೇಂದ್ರಗಳಲ್ಲಿ 21,240 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಅನಾರೋಗ್ಯ ಲಕ್ಷಣಗಳಿರುವ ಮಕ್ಕಳಿಗೆಂದು ಪ್ರತ್ಯೇಕ ಕೊಠಡಿಗಳನ್ನು ಗುರುತಿಸಲಾಗಿದೆ.

ಶಾಲಾ ಸಮವಸ್ತ್ರವನ್ನು ಮಾತ್ರ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿದೆ. ಹಿಜಾಬ್, ಬುರ್ಖಾಗಳನ್ನು ತೆಗೆದಿಡಲು ಕೊಠಡಿಗಳ ವ್ಯವಸ್ಥೆ ಮಾಡಿರುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT