ಭಾನುವಾರ, ಡಿಸೆಂಬರ್ 8, 2019
25 °C

ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಸಂಪುಟ ಸಭೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಕಾರವಾರ: ತಾಲ್ಲೂಕಿನ ಚಿತ್ತಾಕುಲಾ ಗ್ರಾಮದ ಸಾವರಪೈ ಪ್ರದೇಶದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್‌ಸಿಎ) ನಿರ್ಮಿಸಲು ಉದ್ದೇಶಿಸಿರುವ ಕ್ರಿಕೆಟ್ ಸ್ಟೇಡಿಯಂಗೆ ರಾಜ್ಯ ಸಚಿವ ಸಂಪುಟ ಬುಧವಾರ ಅಂತಿಮ ಒಪ್ಪಿಗೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಮುಖಂಡ ಸತೀಶ್ ಸೈಲ್, ‘11 ಎಕರೆ ಸರ್ಕಾರಿ ಜಾಗದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಸ್ಟೇಡಿಯಂ ನಿರ್ಮಾಣವಾಗಲಿದೆ. ಕೆಎಸ್‌ಸಿಎಯ ನಿಯೋಗವು ಈಗಾಗಲೇ ಸ್ಥಳ ಪರಿಶೀಲನೆ ಮಾಡಿದೆ. ಕಂದಾಯ ಇಲಾಖೆಯಿಂದ ಜಾಗವನ್ನು ಕೆಎಸ್‌ಸಿಎಗೆ ವಾರ್ಷಿಕ ಬಾಡಿಗೆಯ ಮೇಲೆ ನೀಡಲಾಗುವುದು. ಈ ಬಗ್ಗೆ ಸೂಕ್ತ ಕರಾರು ಪತ್ರವನ್ನು ತಯಾರಿಸಿ ಅನುಮೋದನೆಗಾಗಿ ರಾಜ್ಯ ಸರಕಾರಕ್ಕೆ ಕಳುಹಿಸಲಾಗಿತ್ತು’ ಎಂದು ತಿಳಿಸಿದ್ದಾರೆ.

‘ಸ್ಟೇಡಿಯಂ ನಿರ್ಮಿಸಲು ಹಸಿರು ನಿಶಾನೆ ದೊರಕುವ ಮೂಲಕ ನನ್ನ ಹಾಗೂ ಕ್ಷೇತ್ರದ ಯುವಕರ ಕನಸು ನನಸಾಗಿದೆ’ ಎಂದು ಅವರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು