ಮಂಗಳವಾರ, ಫೆಬ್ರವರಿ 18, 2020
16 °C
ಜಿಲ್ಲಾ ಮಟ್ಟದ ಮಕ್ಕಳ ಸಂಸತ್‌

ಹಕ್ಕು ಪ್ರತಿಪಾದಿಸಿದ ಮಕ್ಕಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಮಕ್ಕಳ ಸಮಸ್ಯೆಗಳನ್ನು ಮಕ್ಕಳೇ ಮುಂದಾಗಿ ಶಾಸನಸಭೆಯೆದುರು ತೆರೆದಿಡಲು ಅವಕಾಶ ಕಲ್ಪಿಸುವ ಮಕ್ಕಳ ಹಕ್ಕುಗಳ ಸಂಸತ್ ಶನಿವಾರ ಇಲ್ಲಿ ನಡೆಯಿತು.

ಸ್ಕೊಡ್‌ವೆಸ್ ಸಂಸ್ಥೆ ಆಶ್ರಯದಲ್ಲಿ ಶಾಸಕರ ಮಾದರಿ ಶಾಲೆ ನಂ.2ರಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲೆಯ 50 ಶಾಲೆಗಳ 100 ಮಕ್ಕಳು ಭಾಗವಹಿಸಿದ್ದರು. ಮಕ್ಕಳ ಮೇಲಿನ ದೌರ್ಜನ್ಯ, ಮಕ್ಕಳ ಹಕ್ಕುಗಳ ಉಲ್ಲಂಘನೆ, ಮಕ್ಕಳ ಹಕ್ಕುಗಳ ಅನುಷ್ಠಾನದಲ್ಲಿರುವ ತೊಡಕುಗಳ ಬಗ್ಗೆ ವಿದ್ಯಾರ್ಥಿಗಳು ನಿರರ್ಗಳವಾಗಿ ಮಾತನಾಡಿದರು. ಸರ್ಕಾರದ ಎಲ್ಲ ಇಲಾಖೆಗಳು ಒಂದಾಗಿ, ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ಬಿಇಒ ಸದಾನಂದ ಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶೈಕ್ಷಣಿಕ, ಸಾಮಾಜಿಕ, ಕೌಟುಂಬಿಕ ವ್ಯವಸ್ಥೆಯಲ್ಲಿ ಮಕ್ಕಳ ಹಕ್ಕು ಮೊಟಕಾಗುವ ಸಾಧ್ಯತೆಗಳಿವೆ. ಇದರಿಂದ ಮಕ್ಕಳು ಖಿನ್ನತೆಗೆ ಒಳಗಾಗುತ್ತಾರೆ. ಇದು ಅವರ ಶಿಕ್ಷಣದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪಾಲಕರು ಮಕ್ಕಳಿಗೆ ಸೌಲಭ್ಯ ಕಲ್ಪಿಸುವ ಜೊತೆಗೆ, ಪ್ರೀತಿಯನ್ನು ನೀಡಬೇಕು. ಮಕ್ಕಳ ಕಡೆಗೆ ಹೆಚ್ಚು ಗಮನಕೊಡಬೇಕು ಎಂದು ಸಲಹೆ ಮಾಡಿದರು.

ಸ್ಕೊಡ್‌ವೆಸ್ ಸಂಸ್ಥೆಯ ಕಾರ್ಯದರ್ಶಿ ಡಾ.ವೆಂಕಟೇಶ ನಾಯ್ಕ ಮಾತನಾಡಿ,‘ಮಕ್ಕಳ ಭಿಕ್ಷಾಟನೆ ಇಂದಿಗೂ ನಿಂತಿಲ್ಲ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಮಕ್ಕಳಲ್ಲಿ ಹಕ್ಕಿನ ಅರಿವು ಮೂಡಿದಾಗ ಇವುಗಳನ್ನು ನಿಯಂತ್ರಿಸಲು ಸಾಧ್ಯ’ ಎಂದು. ಮಕ್ಕಳ ಹಕ್ಕು ಸಮಿತಿ ಪ್ರಮುಖರಾದ ಅನಿತಾ ಪರ್ವತಿಕರ್, ಅಂಜನಾ ಭಟ್ಟ, ಶಿವರಾಯ ದೇಸಾಯಿ, ಕವಿತಾ ನಾಯ್ಕ, ಬಿ.ಶ್ರೀಪಾದ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ದತ್ತಾತ್ರೇಯ ಭಟ್ಟ ಇದ್ದರು. ರಿಯಾಜ್ ಸಾಗರ್ ಸ್ವಾಗತಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು