ಶನಿವಾರ, ಸೆಪ್ಟೆಂಬರ್ 21, 2019
21 °C

ಉಸಿರಾಟದ ಸಮಸ್ಯೆ;  ಜಾನಪದ ಗಾಯಕಿ ‘ಸುಕ್ರಜ್ಜಿ’ ಆಸ್ಪತ್ರೆಗೆ ದಾಖಲು

Published:
Updated:
Prajavani

ಕಾರವಾರ: ಜಾನಪದ ಗಾಯಕಿ ಸುಕ್ರಿ ಬೊಮ್ಮು ಗೌಡ ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಗುರುವಾರ ದಾಖಲಾದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಂಕೋಲಾ ತಾಲ್ಲೂಕಿನ ಬಡಿಗೇರಿಯಲ್ಲಿರುವ ತಮ್ಮ ನಿವಾಸದಲ್ಲಿದ್ದ ಅವರಿಗೆ, ಬೆಳಿಗ್ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಮಾಹಿತಿ ಪಡೆದ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ, ಆಂಬುಲೆನ್ಸ್‌ ವ್ಯವಸ್ಥೆ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಬಂದರು. 

‘ಸುಕ್ರಜ್ಜಿ ಅವರಿಗೆ ಶ್ವಾಸಕೋಶದಲ್ಲಿ ಸಮಸ್ಯೆ ಇದೆ. ಇದರಿಂದಾಗಿ, ಕಳೆದ ಬಾರಿಯಂತೆಯೇ ಮತ್ತೆ ಅವರಿಗೆ ಉಸಿರಾಟದಲ್ಲಿ ಏರಿಳಿತ ಉಂಟಾಗಿದೆ. ಈ ಬಾರಿ ಸಮಸ್ಯೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲೇ ಇದೆ. ಸಿ.ಟಿ. ಸ್ಕ್ಯಾನ್ ಮಾಡಿಸುತ್ತೇವೆ. ತುರ್ತು ನಿಗಾ ಘಟಕದಲ್ಲೇ ಅವರಿಗೆ ಚಿಕಿತ್ಸೆ ಮುಂದುವರಿಸುತ್ತೇವೆ’ ಎಂದು ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತರಕರ್ ‘ಪ್ರಜಾವಾಣಿ’ಗೆ ತಿಳಿಸಿದರು.

83 ವರ್ಷದ ಸುಕ್ರಜ್ಜಿ, ಜುಲೈ 5ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಐದು ದಿನಗಳ ಬಳಿಕ ಗುಣಮುಖರಾಗಿ ಮನೆಗೆ ಮರಳಿದ್ದರು.

Post Comments (+)