ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಜ್ಞಾನ ಬೇಸಿಗೆ’ ಶಿಬಿರ ಸಮಾರೋಪ

Last Updated 15 ಮೇ 2022, 14:31 IST
ಅಕ್ಷರ ಗಾತ್ರ

ಕಾರವಾರ: ನಗರದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಒಂದು ವಾರ ಹಮ್ಮಿಕೊಳ್ಳಲಾಗಿದ್ದ ‘ವಿಜ್ಞಾನ ಬೇಸಿಗೆ ಶಿಬಿರ’ವು ಭಾನುವಾರ ಸಮಾರೋಪಗೊಂಡಿತು. ಶಿಬಿರದಲ್ಲಿ 50 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರವಾರದ ಶಿವಾಜಿ ಬಿ.ಇಡಿ ಕಾಲೇಜಿನ ಉಪನ್ಯಾಸಕ ನವೀನ್ ದೇವರಭಾವಿ, ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಉಪನ್ಯಾಸಕ ಶಿವಾನಂದ ಭಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಡಾ.ಸಂಜೀವ ದೇಶಪಾಂಡೆ ಸ್ವಾಗತಿಸಿದರು.

ಬಾಡ ಪ್ರೀಮಿಯರ್ ಕಾಲೇಜಿನ ಕಲಾ ಶಿಕ್ಷ ಗಣೇಶ ಬಾಡ್ಕರ್, ಮಣ್ಣಿನ ಮಾದರಿಗಳನ್ನು ಮಾಡುವ ವಿಧಾನವನ್ನುಶಿಬಿರಾರ್ಥಿಗಳಿಗೆ ತಿಳಿಸಿಕೊಟ್ಟರು. ವಿಜ್ಞಾನ ಕೇಂದ್ರದ ಸಿಬ್ಬಂದಿ ವಿಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ವಿಷಯದಲ್ಲಿ ವಿವಿಧ ಮಾದರಿಗಳನ್ನು ಶಿಬಿರಾರ್ಥಿಗಳಿಂದ ಮಾಡಿಸಿದರು. ಜಿಲ್ಲಾ ಪ್ರಯೋಗಾಲಯದ ಸಿಬ್ಬಂದಿ ಉಷಾ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಾತ್ಯಕ್ಷಿಕೆ ನೀಡಿದರು. ಕುಮಟಾದ ಜೀವವೈವಿಧ್ಯ ತಜ್ಞ ಓಂಕಾರ ಪೈ, ಪಕ್ಷಿ ವೀಕ್ಷಣೆ ಮಾಡುವ ತಂತ್ರಗಳು, ವಿಧಾನ, ಪಕ್ಷಿಗಳ ಮಹತ್ವ, ಗುಣಧರ್ಮವನ್ನು ತಿಳಿಸಿಕೊಟ್ಟರು.

ಶಿಬಿರದಲ್ಲಿ ಒಂದು ದಿನ ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಭೇಟಿ ನೀಡಿ ಸ್ಥಾವರ ಕಾರ್ಯ ನಿರ್ವಹಿಸುವ ರೀತಿಯ ಬಗ್ಗೆ ಶಿಬಿರಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಶಿರಸಿಯ ಭೈರುಂಬೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಸಂತ ಹೆಗಡೆ, ‘ಆಗಸ್ 360’ ಸಂಸ್ಥೆಯ ವಿಭವ ಹೆಗಡೆ ಹಾಗೂ ಹರ್ಷ ಖಗೋಳಶಾಸ್ತ್ರ ಆಧಾರಿತ ಚಟುವಟಿಕೆಗಳನ್ನು ಮಾಡಿಸಿದರು.

ಸಮಾರೋಪ ಸಮಾರಂಭದಲ್ಲಿ ಸಿ.ಎಂ.ಎಫ್.ಆರ್.ಐ ತಾಂತ್ರಿಕ ಸಹಾಯಕ ಅಧಿಕಾರಿ ಪ್ರವೀಣ ದುಬೆ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಜಿಲ್ಲಾಡಳಿತ, ಎನ್.ಪಿ.ಸಿ.ಐ.ಎಲ್ ಕೈಗಾ, ಅರಣ್ಯ ಇಲಾಖೆಯ ಕಾರವಾರ ವಿಭಾಗ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT