ಶುಕ್ರವಾರ, ಮಾರ್ಚ್ 31, 2023
23 °C

ಶಿರಸಿ: ಅರ್ಧ ಲಕ್ಷ ದಾಟಿದ ಕೆಂಪಡಿಕೆ ದರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ.

ಹೆಚ್ಚಿದ ದರದಿಂದಾಗಿ ಶಿರಸಿಯ ಟಿಎಸ್ಎಸ್, ಟಿಎಂಎಸ್ ಸಂಸ್ಥೆಗಳ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಟಿಎಸ್ಎಸ್ ಅಡಿಕೆ ವ್ಯಾಪಾರಿ ಅಂಗಳದಲ್ಲಿ ದಾಖಲೆಯ ದರಕ್ಕೆ ಹದಿನೈದು ಕ್ವಿಂಟಲ್‍ಗೂ ಹೆಚ್ಚು ಕೆಂಪಡಿಕೆ ಮಾರಾಟಗೊಂಡಿದೆ.

ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ ಹಿಂದೆ ₹45 ಸಾವಿರ ದಾಟಿದ್ದ ದರ ಈಗ ಅರ್ಧ ಲಕ್ಷ ಬೆಲೆಗೆ ತಲುಪಿದೆ. ಇದು ಎರಡು ವರ್ಷಗಳಲ್ಲಿ ಶಿರಸಿ ಮಾರುಕಟ್ಟೆಯಲ್ಲಿ ಕೆಂಪಡಿಕೆ ಕಂಡ ದಾಖಲೆಯ ದರವಾಗಿದೆ. ಚಾಲಿ ಅಡಿಕೆ ದರವೂ ಸರಾಸರಿ ₹43 ಸಾವಿರಕ್ಕೆ ಏರಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು