ಮಂಗಳವಾರ, ಅಕ್ಟೋಬರ್ 4, 2022
26 °C

ಅರಣ್ಯ ಭೂಮಿ ಹಕ್ಕು: ಅಂತಿಮ ವಿಚಾರಣೆ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ‘ಅರಣ್ಯ ಹಕ್ಕು ಕಾಯ್ದೆ ಅಡಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿ ಸಲ್ಲಿಸಲಾಗಿರುವ ಅರ್ಜಿಯ ಅಂತಿಮ ವಿಚಾರಣೆ ಸುಪ್ರಿಂ ಕೋರ್ಟ್‍ನಲ್ಲಿ ಸೆ,5 ರಿಮದ ನಡೆಯಲಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

‘ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ತಿರಸ್ಕೃತವಾದ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಿ, ಅತಿಕ್ರಮಣ ಪ್ರದೇಶವನ್ನು ಅರಣ್ಯೀಕರಣ ಮಾಡಬೇಕೆಂದು 8 ಪರಿಸರವಾದಿ ಸಂಘಟನೆಗಳು ಸುಪ್ರಿಂ ಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿದ ಮಹತ್ವದ ವಿಚಾರಣೆ ಇದಾಗಿದೆ’ ಎಂದು ತಿಳಿಸಿದ್ದಾರೆ.

‘ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯು ಈ ಪ್ರಕರಣದಲ್ಲಿ ಅತಿಕ್ರಮಣದಾರರ ಪರವಾಗಿ ವಾದ ಮಂಡಿಸಲು ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಗೆ ಸ್ವೀಕೃತಗೊಂಡಿರುವುದು ವಿಶೇಷವಾಗಿದೆ. ಹಿರಿಯ ನ್ಯಾಯವಾದಿಗಳು ಅತಿಕ್ರಮಣದಾರರ ಪರವಾಗಿ ವಾದ ಮಂಡಿಸಲಿದ್ದಾರೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಅರಣ್ಯವಾಸಿಗಳ ಪರವಾಗಿ ರಾಜ್ಯ ಸರ್ಕಾರಕ್ಕೆ ತಿದ್ದುಪಡಿ ಪ್ರಮಾಣ ಪತ್ರ ಸಲ್ಲಿಸಲು ಒತ್ತಾಯಿಸಿದ್ದರೂ, ಅರಣ್ಯವಾಸಿಗಳ ಪರವಾಗಿ ತಿದ್ದುಪಡಿ ಪ್ರಮಾಣ ಪತ್ರ ಇಂದಿನವರೆಗೂ ರಾಜ್ಯ ಸರ್ಕಾರ ಸಲ್ಲಿಸಿಲ್ಲ’ ಎಂದು ಆರೋಪಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು