ಶುಕ್ರವಾರ, ಸೆಪ್ಟೆಂಬರ್ 17, 2021
22 °C

ಶಿರಸಿ: ಭೂಕುಸಿತ ಪ್ರದೇಶಕ್ಕೆ ತಹಶೀಲ್ದಾರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಭೂಕುಸಿತ ಸಂಭವಿಸಿದ ತಾಲ್ಲೂಕಿನ ಮತ್ತಿಘಟ್ಟಾದ ಕೆಳಗಿನಕೇರಿ ಪ್ರದೇಶಕ್ಕೆ ತಹಶೀಲ್ದಾರ್ ಎಂ.ಆರ್. ಕುಲಕರ್ಣಿ ಭೇಟಿ ನೀಡಿ ಪರಿಶೀಲಿಸಿದರು.

ಈ ಭಾಗದಲ್ಲಿ ಪದೇ ಪದೇ ಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಅವರು ಕೂಲಂಕಷವಾಗಿ ಸ್ಥಿತಿ ಅವಲೋಕಿಸಿದರು. ಅವಘಡದಲ್ಲಿ ಹಾನಿಗೀಡಾದ ಅಡಿಕೆ ತೋಟ, ರಸ್ತೆ ಸಂಪರ್ಕ ಕಡಿತಗೊಂಡಿದ್ದನ್ನು ಪರಾಮರ್ಶಿಸಿದರು.

‘ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದ ಆಸ್ತಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸಿಕೊಡುವ ಭರವಸೆಯನ್ನು ಸಂತ್ರಸ್ತರಿಗೆ ನೀಡಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.