ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರು ಸಂಸ್ಕಾರಯುತ ಶಿಕ್ಷಣ ನೀಡಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದ ಪ್ರಶಸ್ತಿ ಪ್ರದಾನ
Last Updated 5 ಸೆಪ್ಟೆಂಬರ್ 2020, 6:05 IST
ಅಕ್ಷರ ಗಾತ್ರ

ಶಿರಸಿ: ಸಂಸ್ಕಾರ ಇಲ್ಲದಿದ್ದರೆ ಸಮಾಜಕ್ಕೆ ಸಮಸ್ಯೆ. ಹೀಗಾಗಿ ಶಿಕ್ಷಕರೇ ಸಮಾಜದ ಸುಧಾರಣೆಗೆ ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದ ರಾಘವೆಂದ್ರ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ಶಿರಸಿ ಶೈಕ್ಷಣಿಕ ಜಿಲ್ಲಾಮಟ್ಟದಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಸುಧಾರಣೆಗೆ ರಾಧಾಕೃಷ್ಣನ್ ನೀಡಿದ ಕೊಡುಗೆ ಅಪಾರ. ಪುಸ್ತಕದಲ್ಲಿರುವಷ್ಟೇ ವಿಷಯ ಕಲಿಸದೆ, ವಿದ್ಯಾರ್ಥಿಗಳಿಗೆ ಹೆಚ್ಚಿನ ಜ್ಞಾನ ನೀಡಬೇಕು. ರಾಷ್ಟ್ರಜ್ಞಾನ ನೀಡಬೇಕು. ಸಂಸ್ಕಾರಯುತ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದಿವಾಕರ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಮಟ್ಟದ ಅತ್ತುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ನಾರಾಯಣ ಭಾಗವತ್, ಎಂ.ಟಿ.ಭಾಗವತ್ ಕಾರ್ಯಕ್ರಮ ನಿರೂಪಣೆ ಮಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯರಾದ ಪ್ರಭಾವತಿ ಗೌಡ, ಬಸವರಾಜ ದೊಡ್ಮನಿ, ತಾಲ್ಲುಕು ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷ ರವಿ ಹಳದೋಟ, ಡಯಟ್ ಪ್ರಾಂಶುಪಾಲ ಬಿ.ವಿ.ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಎಸ್.ಹೆಗಡೆ, ಶಿಕ್ಷಕರ ಸಂಘದ ನಾರಾಯಣ ನಾಯಕ, ದಿನೇಶ ನಾಯ್ಕ, ನಾರಾಯಣ ನಾಯ್ಕ, ಪ್ರಶಾಂತ ಹೆಗಡೆ, ಅಶೋಕ ಭಜಂತ್ರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT