ಭಾನುವಾರ, ಮಾರ್ಚ್ 29, 2020
19 °C

ಮಾರಿಕಾಂಬಾ ದೇವಾಲಯದ ಪ್ರವೇಶ ನಿರ್ಬಂಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಕೊರೊನಾ ವೈರಾಣು ಸೋಂಕು ಹರಡುವುದನ್ನು ಕಡ್ಡಾಯವಾಗಿ ತಡೆಗಟ್ಟುವ ಹಿನ್ನೆಲೆಯಲ್ಲಿ ಶುಕ್ರವಾರದಿಂದ ಮುಂದಿನ ಆದೇಶ ಬರುವವರೆಗೆ, ಇಲ್ಲಿನ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತಾದಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಭಕ್ತರು ಯಾವುದೇ ರೀತಿಯ ಸೇವೆ ಸಲ್ಲಿಸಲು, ದೇವರ ತೀರ್ಥ ಪ್ರಸಾದ ವಿತರಣೆ, ಪ್ರತಿದಿನದ ಅನ್ನ ಪ್ರಸಾದ ವಿತರಣೆ, ದೇವಸ್ಥಾನದ ವಸತಿ ಗೃಹದಲ್ಲಿ ಭಕ್ತರಿಗೆ ತಂಗಲು ಸಹ ಅವಕಾಶ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜನತಾ ಕರ್ಫ್ಯೂಗೆ ಬೆಂಬಲ

ಶಿರಸಿ: ಪ್ರಧಾನಿ ನರೇಂದ್ರ ಮೋದಿ ನೀಡಿರುವ ಜನತಾ ಕರ್ಫ್ಯೂವನ್ನು ಬೆಂಬಲಿಸಿ, ಉತ್ತರ ಕನ್ನಡ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಮಾ.22ರಂದು ಎಲ್ಲ ಪೆಟ್ರೋಲ್ ಬಂಕ್‌ಗಳಲ್ಲಿ ಸಾರ್ವಜನಿಕರಿಗೆ ಇಂಧನ ಮಾರಾಟವನ್ನು ಸ್ಥಗಿತಗೊಳಿಸಲಿದೆ. ಅಗ್ನಿ ಶಾಮಕ, ಆಂಬುಲೆನ್ಸ್, ಪೊಲೀಸ್ ಮೊದಲಾದ ತುರ್ತು ಸೇವೆಗೆ ಮಾತ್ರ ಇಂಧನ ಪೂರೈಸಲು ಬಂಕ್‌ನಲ್ಲಿ ಒಬ್ಬ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಭಾಸ್ಕರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು