ಭಾನುವಾರ, ನವೆಂಬರ್ 17, 2019
29 °C

ಹೆದ್ದಾರಿಯಲ್ಲಿ ತಾತ್ಕಾಲಿಕ ಚೆಕ್‌ಪೋಸ್ಟ್‌

Published:
Updated:
Prajavani

ಕಾರವಾರ: ಜಿಲ್ಲೆಯಲ್ಲಿ ಆ.12ರಂದು ‘ಬಕ್ರೀದ್’ ಹಬ್ಬದ ಆಚರಣೆ ನಡೆಯಲಿದ್ದು, ಈ ವೇಳೆ ಅಕ್ರಮವಾಗಿ ಜಾನುವಾರು ಸಾಗಾಟ ಆಗುವುದನ್ನು ತಡೆಯಲು ಹೆದ್ದಾರಿಯಲ್ಲಿ ತಾತ್ಕಾಲಿಕ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ.

ಜಿಲ್ಲಾ ಪೊಲೀಸರು ಹೆದ್ದಾರಿಗಳಲ್ಲಿ ಸುಮಾರು 15 ತಾತ್ಕಾಲಿಕ ಚೆಕ್‌ಪೋಸ್ಟ್‌ಗಳನ್ನು ತೆರೆದಿದ್ದಾರೆ. ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು, ತಪಾಸಣೆ ಮಾಡುತ್ತಿದ್ದಾರೆ. ಹೋಗಿ ಬರುವ ಸರಕು ಸಾಗಣೆ ವಾಹನಗಳ ನೋಂದಣಿ ಸಂಖ್ಯೆಗಳನ್ನು ಬರೆದಿಟ್ಟುಕೊಳ್ಳುತ್ತಿದ್ದಾರೆ.

ಭಟ್ಕಳ, ಕುಂದಾಪುರ ಭಾಗಕ್ಕೆ ಹುಬ್ಬಳ್ಳಿ, ಹಾವೇರಿ ಭಾಗಗಳಿಂದ ಹೆಚ್ಚು ಜಾನುವಾರನ್ನು ಅಕ್ರಮವಾಗಿ ಸಾಗಾಟ ಮಾಡಲಾಗುತ್ತದೆ. ಇತ್ತೀಚಿಗೆ ಹಲವೆಡೆ ಇಂಥ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

‘ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಈಗಾಗಲೇ ಅನೇಕ ಕಡೆಗಳಲ್ಲಿ ಚೆಕ್‌ಪೋಸ್ಟ್‌ಗಳಿದ್ದವು. ಮತ್ತೆ ಕೆಲವನ್ನು ಇತ್ತೀಚಿಗೆ ಹೊಸದಾಗಿ ತೆರೆದಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ ತಿಳಿಸಿದರು.

ಪ್ರತಿಕ್ರಿಯಿಸಿ (+)