ಗುರುವಾರ , ಸೆಪ್ಟೆಂಬರ್ 16, 2021
24 °C

ಶಿರಸಿ; ಐದು ಕೇಂದ್ರಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿ.ಇ.ಟಿ.) ಆ.22 ರಂದು ನಗರದ ಐದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಶಿರಸಿ ಶೈಕ್ಷಣಿಕ ಜಿಲ್ಲೆಯ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಮಾರಿಕಾಂಬಾ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಸೇರಿ 3 ಕೇಂದ್ರಗಳಲ್ಲಿ, ಆವೆಮರಿಯಾ ಪ್ರೌಢಶಾಲೆ ಹಾಗೂ ಲಯನ್ಸ್ ಪ್ರೌಢಶಾಲೆಯಲ್ಲಿ ಪರೀಕ್ಷೆ ನಡೆಯಲಿದೆ.

ಅಂದು ಬೆಳಿಗ್ಗೆ 9.30 ರಿಂದ 12 ಗಂಟೆವರೆಗೆ ಮೊದಲ ಪ್ರಶ್ನೆ ಪತ್ರಿಕೆ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ 784 ಅಭ್ಯರ್ಥಿಗಳು ಹೆಸರು ನೊಂದಾಯಿಸಿಕೊಂಡಿದ್ದಾರೆ. ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ನಡೆಯಲಿರುವ ಎರಡನೇ ಪರೀಕ್ಷೆಗೆ 1084 ಅಭ್ಯರ್ಥಿಗಳ ಹೆಸರು ನೊಂದಾವಣೆಯಾಗಿದೆ ಎಂದು ಡಿಡಿಪಿಐ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು