ಕರಾವಳಿಯಲ್ಲಿ ಗಾಳಿ, ಗುಡುಗು ಸಹಿತ ಮಳೆ

7

ಕರಾವಳಿಯಲ್ಲಿ ಗಾಳಿ, ಗುಡುಗು ಸಹಿತ ಮಳೆ

Published:
Updated:
Deccan Herald

ಕಾರವಾರ: ಜಿಲ್ಲೆಯ ಕರಾವಳಿಯ ವಿವಿಧೆಡೆ ಶುಕ್ರವಾರ ಸಂಜೆ ಗುಡುಗು, ರಭಸದ ಗಾಳಿಯ ಸಹಿತ ಉತ್ತಮ ಮಳೆಯಾಗಿದೆ. ನಗರದ ಪಿಕಳೆ ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರವೊಂದು ಬಿದ್ದಿತು. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿತು.

ನಗರದಲ್ಲಿ ಸಂಜೆ 5.30ರಿಂದ ಒಂದು ತಾಸು ಬಿರುಸಿನ ಮಳೆ ಸುರಿಯಿತು. ಗಾಳಿಗೆ ನಗರದ ಕೆಲವೆಡೆ ಮರದ ಕೊಂಬೆಗಳು ಮುರಿದಿವೆ. ವಿದ್ಯುತ್ ಸಂಪರ್ಕವೂ ಕಡಿತವಾಗಿ, ನಾಗರಿಕರು ಪರದಾಡಿದರು. 

ಸಿದ್ದಾಪುರ, ಭಟ್ಕಳ, ಹೊನ್ನಾವರ, ಅಂಕೋಲಾದಲ್ಲೂ ಉತ್ತಮ ಮಳೆಯಾಗಿದೆ. ಉಳಿದಂತೆ, ಶಿರಸಿಯಲ್ಲಿ ಒಂದು ತಾಸು ಮಳೆಯಾಯಿತು. ಯಲ್ಲಾಪುರ, ಮುಂಡಗೋಡ ತಾಲ್ಲೂಕುಗಳ ವಿವಿಧೆಡೆ ತುಂತುರು ಮಳೆಯಾಯಿತು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !