ಬುಧವಾರ, ಸೆಪ್ಟೆಂಬರ್ 23, 2020
24 °C
ಒಂದು ಮೀಟರ್‌ ಉದ್ದ, 100 ಕೆ.ಜಿ ತೂಕ

ದಡಕ್ಕೆ ಬಂದ ಕಡಲಾಮೆಯ ಕಳೇಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಆಲಿವ್ ರೈಡ್ಲಿ ಪ್ರಬೇಧಕ್ಕೆ ಸೇರಿದ ಕಡಲಾಮೆಯ ಕಳೇಬರವು ನಗರದ ಸಾಗರ ದರ್ಶನ ಸಭಾಂಗಣದ ಹಿಂಭಾಗದ ಕಡಲತೀರಕ್ಕೆ ಸೋಮವಾರ ತೇಲಿ ಬಂದಿದೆ.

ದೇಹದ ಮೇಲೆ ಯಾವುದೇ ಗಾಯಗಳು ಮೇಲ್ನೋಟಕ್ಕೆ ಕಂಡು ಬಂದಿಲ್ಲ. ಮೀನುಗಾರಿಕೆಗೂ ನಿಷೇಧ ಇರುವುದರಿಂದ ಬಲೆಗಳು ಸಿಕ್ಕಿ ಸತ್ತಿರುವ ಸಾಧ್ಯತೆಗಳು ಬಹಳ ಕಡಿಮೆ. ವಯೋಸಹಜ ಸಾವು ಎಂದು ಕಡಲ ಜೀವವಿಜ್ಞಾನ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಶಿವಕುಮಾರ್ ಹರಗಿ ಅಭಿಪ್ರಾಯಪಟ್ಟಿದ್ದಾರೆ.

ಸುಮಾರು ಒಂದು ಮೀಟರ್ ಉದ್ದ, ಒಂದು ಕ್ವಿಂಟಲ್ ತೂಕದ ಈ ಆಮೆಗೆ ಸುಮಾರು 70 ವರ್ಷ ವಯಸ್ಸಾಗಿದೆ ಎಂದು ಅವರು ಅಂದಾಜಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು