ಶುಕ್ರವಾರ, ನವೆಂಬರ್ 15, 2019
23 °C

ಮುರ್ಡೇಶ್ವರ: ಸಮುದ್ರದಲ್ಲಿ ಮುಳುಗಿ ಪ್ರವಾಸಿಗ ಸಾವು

Published:
Updated:

ಭಟ್ಕಳ: ತಾಲ್ಲೂಕಿನ ಮುರ್ಡೇಶ್ವರಕ್ಕೆ ಭಾನುವಾರ ಬೆಳಿಗ್ಗೆ ಪ್ರವಾಸ ಬಂದಿದ್ದ ಬೆಂಗಳೂರಿನ ಮಲ್ಲೇಶ್ವರ ನಿವಾಸಿ ರಾಜು (30) ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

11 ಗೆಳೆಯರ ಜೊತೆ ಅವರು ಪ್ರವಾಸ ಬಂದಿದ್ದರು. ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಅವರು ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದ್ದಾರೆ. ಮೀನುಗಾರರು ಮತ್ತು ಸಾರ್ವಜನಿಕರು ಕಾಪಾಡಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಮೃತದೇಹವನ್ನು ಆರ್.ಎನ್.ಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)