ಬುಧವಾರ, ಜುಲೈ 28, 2021
28 °C
ಏಕಮುಖ ರಸ್ತೆಯಲ್ಲಿ ವಾಹನ ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶ

ಗೋಕರ್ಣ | ವಾಹನದ ಕಿಟಕಿಯಲ್ಲೇ ಗೃಹರಕ್ಷಕನ ಎಳೆದೊಯ್ದು ಪ್ರವಾಸಿಗರ ದರ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕರ್ಣ: ಸಂಚಾರ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಗೃಹರಕ್ಷಕ ದಳದ ಕರ್ತವ್ಯನಿರತ ಸಿಬ್ಬಂದಿಯನ್ನು, ಪ್ರವಾಸಿಗರು ತವೆರಾ ವಾಹನದ ಕಿಟಕಿಯಲ್ಲಿ ಸಿಕ್ಕಿಸಿಕೊಂಡು ಎಳೆದೊಯ್ದಿದ್ದಾರೆ. ಸುಮಾರು 300 ಮೀಟರ್‌ವರೆಗೆ ಎಳೆದುಕೊಂಡು ಹೋಗಿ ಕೆಳಕ್ಕೆ ದೂಡಡಿದ್ದಾರೆ.

ಶುಕ್ರವಾರ ಆಗಿರುವ ಈ ಘಟನೆಯು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಸಿಕ್ಕಿದೆ. ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾಲ್ವರು ಪ್ರವಾಸಿಗರಿದ್ದ ವಾಹನವನ್ನು ಇಲ್ಲಿನ ಕಡಲತೀರದಿಂದ ಏಕಮುಖ ಸಂಚಾರದ ರಸ್ತೆಯಲ್ಲಿ ಚಲಾಯಿಸಿಕೊಂಡು ಬರಲಾಗಿತ್ತು. ಗೃಹರಕ್ಷಕ ಸಿಬ್ಬಂದಿ ಚಿದಾನಂದ ಶಾನಭಾಗ್ ವಾಹನವನ್ನು ತಡೆದು ರಸ್ತೆ ನಿಯಮ ಉಲ್ಲಂಘನೆಯ ಬಗ್ಗೆ ಪ್ರಶ್ನಿಸಿದ್ದಾರೆ. ಅಷ್ಟಕ್ಕೇ ಪ್ರವಾಸಿಗರು, ಅವರನ್ನು ಕಿಟಕಿಯಲ್ಲಿ ಎಳೆದುಕೊಂಡು, ವಾಹನವನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದಾರೆ.

ಚಿದಾನಂದ ವಾಹನದಲ್ಲಿ ನೇತಾಡುತ್ತಲೇ ಸಾಗುತ್ತಿರುವ ದೃಶ್ಯ ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರವಾಸಿಗರ ಈ ದರ್ಪಕ್ಕೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿದಾನಂದ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಾಹನ ಚಲಿಸಿರುವ ಮಾರ್ಗದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು