ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರರಿಗೆ ವೇತನ ಹೆಚ್ಚಳ: ಸಚಿವ ಶ್ರೀರಾಮುಲು ಭರವಸೆ

Last Updated 4 ಮೇ 2022, 14:33 IST
ಅಕ್ಷರ ಗಾತ್ರ

ಶಿರಸಿ: ಸಾರಿಗೆ ಸಂಸ್ಥೆ ಸಿಬ್ಬಂದಿಗೆ ವೇತನ ಹೆಚ್ಚಳದ ಬಗ್ಗೆ ಹಣಕಾಸು ಇಲಾಖೆ ಜತೆ ಚರ್ಚಿಸಿ ಸಕಾರಾತ್ಮಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದರು.

ನಗರದಲ್ಲಿ ಬುಧವಾರ ಬಸ್ ನಿಲ್ದಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಾರಿಗೆ ಸಿಬ್ಬಂದಿಗೆ ಪ್ರತಿ ತಿಂಗಳು ಸಂಬಳವಾಗದ ಸಮಸ್ಯೆ ಗಮನದಲ್ಲಿದೆ. ಸಕಾಲಕ್ಕೆ ವೇತನ ಬಿಡುಗಡೆಗೆ ಕ್ರಮವಹಿಸಲಾಗುವುದು’ ಎಂದರು.

‘ಅರವತ್ತು ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪರ್ಸೆಂಟೇಜ್ ವ್ಯವಹಾರಕ್ಕೆ ಜನ್ಮ ನೀಡಿದೆ. ಸಚಿವ ಅಶ್ವತ್ಥ ನಾರಾಯಣ ಅವರ ಮೇಲೆ ಡಿ.ಕೆ‌.ಶಿವಕುಮಾರ್ ನಿರಾಧಾರ ಆರೋಪ ಹೊರಿಸುತ್ತಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್ ನಾಯಕರು ತಮ್ಮ ತಪ್ಪನ್ನು ಬಿಜೆಪಿ ಮೇಲೆ ಹೊರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ನೇಮಕಾತಿ ಹಗರಣವನ್ನು ಈಗಿನ ಸರ್ಕಾರ ಪತ್ತೆ ಹಚ್ಚಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ’ ಎಂದರು.

‘ಉಪಮುಖ್ಯಮಂತ್ರಿ ಹುದ್ದೆ ನೀಡುವುದು, ಬಿಡುವುದು ಪಕ್ಷದ ವರಿಷ್ಠರ ನಿರ್ಧಾರ. ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ಜನಾರ್ಧನ ರೆಡ್ಡಿ ಅವರನ್ನು ರಾಜಕೀಯಕ್ಕೆ ಮರಳಿ ಕರೆತರುವ ಬಗ್ಗೆ ರಾಜಕೀಯ ಲಾಭ, ನಷ್ಟ ಆಧರಿಸಿ ಪಕ್ಷ ತೀರ್ಮಾನಿಸಲಿದೆ. ಅವರು ಪುನಃ ಬಂದರೆ ಸಂತೋಷ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT