ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ: ಕೋವಿಡ್‌ನಿಂದ 28 ಮಕ್ಕಳು ಅನಾಥ –ನೋಡಲ್ ಅಧಿಕಾರಿ

Last Updated 6 ಜೂನ್ 2021, 12:20 IST
ಅಕ್ಷರ ಗಾತ್ರ

ಕಾರವಾರ: ‘ರಾಜ್ಯದಲ್ಲಿ ಕೋವಿಡ್‌ನಿಂದ ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡ 28 ಮಕ್ಕಳನ್ನು ಗುರುತಿಸಲಾಗಿದೆ. 21 ಕುಟುಂಬಗಳಲ್ಲಿ ಹೀಗಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೋಹನರಾಜ್ ತಿಳಿಸಿದರು.

ಕೋವಿಡ್‌ನಿಂದ ಅನಾಥರಾದ ಮಕ್ಕಳ ಆರೈಕೆ ಮತ್ತು ಪೋಷಣೆ ಸಂಬಂಧ ನೋಡಲ್ ಅಧಿಕಾರಿಯನ್ನಾಗಿ ಇವರನ್ನು ರಾಜ್ಯ ಸರ್ಕಾರ ನಿಯುಕ್ತಿಗೊಳಿಸಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಇಂಥ ಮಕ್ಕಳನ್ನು ಗುರುತಿಸಿ ಅವರಿಗೆ ಅಗತ್ಯ ನೆರವು ನೀಡಲಾಗುತ್ತಿದೆ. ಶನಿವಾರದ ಮಾಹಿತಿಯಂತೆ ರಾಯಚೂರು ಜಿಲ್ಲೆಯಲ್ಲಿ ನಾಲ್ವರು, ಬಾಗಲಕೋಟೆ ಜಿಲ್ಲೆಯಲ್ಲಿ ಮೂವರು, ಬೆಳಗಾವಿ, ಬೆಂಗಳೂರು ನಗರ, ಬೀದರ್, ಗದಗ, ಹಾಸನ, ಕೊಡಗು, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೋಲಾರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ತಲಾ ಒಬ್ಬರು ಅನಾಥರಾಗಿದ್ದಾರೆ’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT